ಅಕ್ರಮ ಗಣಿಗಾರಿಕೆ ವರದಿಯಲ್ಲಿ ಅಧಿಕಾರಿಗಳು ಹಾಗೂ ಪ್ರಭಾವಿ ರಾಜಕಾರಣಿಗಳ ಹೆಸರಿದೆ, ಇದರಿಂದಾಗಿ ವರದಿ ತಯಾರಿಸುತ್ತಿರುವ ಕಚೇರಿ ಸಿಬ್ಬಂದಿಗೆ ರಕ್ಷಣೆ ನೀಡುವುದು ಅಗತ್ಯ ಎಂದು ಹೇಳಿದ್ದಾರೆ.
ಶೀಘ್ರ ವರದಿಗೆ ಸಚಿವ ಶ್ರೀರಾಮುಲು ಒತ್ತಾಯ ಅಕ್ರಮ ಗಣಿಗಾರಿಕೆ ವರದಿ ನೀಡಲು ಲೋಕಾಯುಕ್ತರು ವಿಳಂಬ ಮಾಡಬಾರದು ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ರಾಯಚೂರು ಜಿಲ್ಲೆಯ ಚಿಕ್ಕ ಮಂಚಾಲೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗಣಿ ವರದಿಯನ್ನು ಸಿನಿಮಾ ರೀತಿ ಎಳೆಯದೇ ಶೀಘ್ರವಾಗಿ ನೀಡುವಂತೆ ಒತ್ತಾಯಿಸಿದ್ದಾರೆ.
ಸರಕಾರಕ್ಕೆ ಯಾವುದೇ ಹಾನಿಯಿಲ್ಲ ಲೋಕಾಯುಕ್ತ ವರದಿಯಿಂದ ರಾಜ್ಯ ಸರಕಾರದ ಕಾರ್ಯನಿರ್ವಹಣೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಬಿಜೆಪಿ ಮುಖಂಡ ಸದಾನಂದ ಗೌಡ ಹೇಳಿದ್ದಾರೆ. ವರದಿಯಿಂದಾಗಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆಗಳು ನಡೆಯಲಿವೆ ಎಂಬ ಊಹಾಪೋಹಗಳಿಗೆ ತೆರೆ ಎಳೆದ ಅವರು ಸರಕಾರವು ಐದು ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರೈಸಲಿದೆ ಎಂದು ತಿಳಿಸಿದ್ದಾರೆ.
ಲೋಕಾಯುಕ್ತರಿಗೆ ಕಾಂಗ್ರೆಸ್ ಮನವಿ ಅಕ್ರಮ ಗಣಿ ವರದಿಯಲ್ಲಿ ಮುಖ್ಯಮಂತ್ರಿ ಹೆಸರು ಪ್ರಸ್ತಾಪಿಸದಂತೆ ಪ್ರಭಾವ ಬೀರಲು ಯತ್ನಿಸಿದ ಧನಂಜಯ ಕುಮಾರ್ ಹಾಗೂ ಸಚಿವ ವಿ.ಎಸ್.ಆಚಾರ್ಯ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಮುಖಂಡ ಉಗ್ರಪ್ಪ ನೇತೃತ್ವದಲ್ಲಿ ಬುಧವಾರ ಜಾಥಾ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಲೋಕಾಯುಕ್ತರಿಗೆ ಮನವಿ ಸಲ್ಲಿಸಿದರು.