ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗಣಿ: ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ-ಎಚ್‌ಡಿಕೆ (Lokayuktha | BJP | Illegal Mining | Yeddyurappa | JDS | Phone Tapping)
ಅಕ್ರಮ ಗಣಿಗಾರಿಕೆ ವರದಿಗೆ ಸಂಬಂಧಿಸಿದಂತೆ ತನ್ನ ವಿರುದ್ಧದ ಆರೋಪ ಸಾಬೀತಾದರೆ ತಾನು ರಾಜಕೀಯ ನಿವೃತ್ತಿ ಪಡೆಯುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದು, ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ನಂತರ ಆ ಬಗ್ಗೆ ಪ್ರತಿಕ್ರಿಯೆ ನೀಡವುದಾಗಿ ಹೇಳಿದರು.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಶನಿವಾರ ಸದಾಶಿವನಗರ ಗೆಸ್ಟ್‌ಹೌಸ್‌ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ರಮ ಗಣಿ ವರದಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರ ಹೆಸರು ಉಲ್ಲೇಖವಾಗಿದೆ. ಅಲ್ಲದೇ ಈ ಬಗ್ಗೆ ಸಾಕಷ್ಟು ದಾಖಲೆ ಇರುವುದಾಗಿಯೂ ಲೋಕಾಯುಕ್ತರು ತಿಳಿಸಿದ್ದಾರೆ. ಆ ನಿಟ್ಟಿನಲ್ಲಿ ಸಿಎಂಗೆ ನೈತಿಕತೆ ಇದ್ದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಹೈಕಮಾಂಡ್ ಕೂಡ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆಯಂತೆ ನಡೆದುಕೊಳ್ಳುತ್ತಿದೆ ಎಂದ ಅವರು, ಹೈಕಮಾಂಡ್‌ಗೆ ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳುವ ಪವರ್ ಇದೆಯಾ ಎಂದು ಪ್ರಶ್ನಿಸಿದರು.

ಅಕ್ರಮ ಗಣಿಗಾರಿಕೆಯಲ್ಲಿ ಮುಖ್ಯಮಂತ್ರಿಗಳು ಶಾಮೀಲಾಗಿರುವುದು ಸಾಬೀತಾಗಿದೆ. ಹಾಗಾಗಿ ಬಿಜೆಪಿ ಹೈಕಮಾಂಡ್ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹಾಗೂ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.

ಅಲ್ಲದೇ ಆಡಳಿತಾರೂಢ ಬಿಜೆಪಿ ಸರ್ಕಾರ ಲೋಕಾಯುಕ್ತರ ಫೋನ್ ಕದ್ದಾಲಿಕೆ ಮಾಡಿದಂತೆ ಕಳೆದ ಒಂದೂವರೆ ವರ್ಷದಿಂದ ತನ್ನ ದೂರವಾಣಿಯನ್ನು ಕದ್ದಾಲಿಸುತ್ತಿರುವುದಾಗಿ ಆರೋಪಿಸಿದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಅಕ್ರಮ ಗಣಿ, ಲೋಕಾಯುಕ್ತ, ಬಿಜೆಪಿ, ಯಡಿಯೂರಪ್ಪ, ಜೆಡಿಎಸ್, ಸಂತೋಷ್ ಹೆಗ್ಡೆ, ಫೋನ್ ಕದ್ದಾಲಿಕೆ