ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಮನೆ ನೆಲಮಾಳಿಗೆಯಿಂದ್ಲೇ ಫೋನ್ ಕದ್ದಾಲಿಕೆ: ಸಿದ್ದು (BJP | Yeddyurappa | Phone Tapping | Siddaramaiah | Congress | Lokayuktha)
WD
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಡಾಲರ್ಸ್ ಕಾಲೋನಿ ನಿವಾಸದ ನೆಲಮಾಳಿಗೆ ಹಾಗೂ ಚಾಮರಾಜಪೇಟೆಯಲ್ಲಿರುವ ಆರ್ಎಸ್ಎಸ್ ಪ್ರಧಾನ ಕಚೇರಿ ಕೇಶವಕೃಪಾದಿಂದಲೇ ಲೋಕಾಯುಕ್ತರ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದರು.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಶನಿವಾರ ನಗರದ ಫ್ರೀಡಂಪಾರ್ಕ್‌ನಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವರು ಶಾಮೀಲಾಗಿರುವ ಹಿನ್ನೆಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗುಪ್ತಚರ ದಳ ಮುಖ್ಯಮಂತ್ರಿಗಳ ಕೈಯಲ್ಲೇ ಇದೆ. ಹಾಗಾಗಿ ಮುಖ್ಯಮಂತ್ರಿಗಳ ನಿರ್ದೇಶನ ಮೇರೆಗೆ ಲೋಕಾಯುಕ್ತರ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂದು ನೇರವಾಗಿ ದೂರಿದರು. ಲೋಕಾಯುಕ್ತರ ವರದಿ ಸೋರಿಕೆಯ ಹಿಂದೆಯೂ ಸರ್ಕಾರದ ಪಾತ್ರ ಇರುವುದಾಗಿ ಈ ಸಂದರ್ಭದಲ್ಲಿ ಹೇಳಿದರು.

ಈ ಬಾರಿ ಬಿಜೆಪಿ ಸರ್ಕಾರ ಪತನ ಆಗಿಯೇ ಆಗುತ್ತದೆ ಎಂದು ಭವಿಷ್ಯ ನುಡಿದ ಅವರು,ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ಕಾಂಗ್ರೆಸ್ ಹೋರಾಟ ನಿಲ್ಲುವುದಿಲ್ಲ ಎಂದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಯಡಿಯೂರಪ್ಪ, ಫೋನ್ ಕದ್ದಾಲಿಕೆ, ಸಿದ್ದರಾಮಯ್ಯ, ಕಾಂಗ್ರೆಸ್, ಲೋಕಾಯುಕ್ತ