ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ನಿತಿನ್ ಗಡ್ಕರಿ ಅವರ ನಿವಾಸದಲ್ಲಿ ನಡೆದ ಸಂಸದೀಯ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಿಸಲು ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ ಎಂದು ಪಕ್ಷದ ವಕ್ತಾರ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಕಳಂಕಿತ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಬದಲಿಸಲು ಹಿರಿಯ ನಾಯಕರು ನಿರ್ಧರಿಸಿದ್ದಾರೆ. ಹೈಕಮಾಂಡ್ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಸಂಸದೀಯ ಸಭೆಯಲ್ಲಿ ಪಕ್ಷದ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಲೋಕಸಭೆಯ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಅರುಣ್ ಜೇಟ್ಲಿ, ವೆಂಕಯ್ಯ ನಾಯ್ಡು ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು ಎಂದು ಪ್ರಸಾದ್ ತಿಳಿಸಿದ್ದಾರೆ.
ಬಿಜೆಪಿ ಹಿರಿಯ ನಾಯಕ ರಾಜನಾಥ್ ಸಿಂಗ್ ಮತ್ತು ಅರುಣ್ ಜೇಟ್ಲಿ ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ಶಾಸಕಾಂಗ ಸಭೆಯಲ್ಲಿ ನೂತನ ಆಯ್ಕೆ ಮಾಡಲಾಗುತ್ತದೆ ಎಂದು ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.