ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ಪ್ರಾದೇಶಿಕ ಪಕ್ಷ ಕಟ್ಟಲ್ಲ: ಕೆ.ಎಸ್.ಈಶ್ವರಪ್ಪ (Ishwarappa | Yeddyurappa | BJP | Congress | Lokayukta | Hicommond | Illegal Mining)
WD
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಪಟ್ಟ ತ್ಯಜಿಸಲು ಬಿಜೆಪಿ ಹೈಕಮಾಂಡ್ 12 ಗಂಟೆಗಳ ಡೆಡ್‌ಲೈನ್ ವಿಧಿಸಿದ್ದು, ಮತ್ತೊಂದೆಡೆ ಯಡಿಯೂರಪ್ಪ ಪಕ್ಷದ ಮೇಲೆ ಅಸಮಾಧಾನಗೊಂಡು ಪ್ರಾದೇಶಿಕ ಪಕ್ಷ ಕಟ್ಟಲ್ಲ. ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುತ್ತೇವೆ ಎಂದು ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ತಮ್ಮ ಷರತ್ತು ಬದ್ಧ ಬೇಡಿಕೆಗೂ ಜಗ್ಗದೆ ರಾಜೀನಾಮೆ ಪಡೆದಿದ್ದೇ ಆದಲ್ಲಿ ಯಡಿಯೂರಪ್ಪ ಬಿಜೆಪಿ ತ್ಯಜಿಸಿ ಪ್ರಾದೇಶಿಕ ಪಕ್ಷ ಕಟ್ಟುವ ಸಾಧ್ಯತೆಗಳಿವೆ ಎಂಬ ಊಹಾಪೋಹದ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ, ಸುಮ್ಮೆ ಇದು ಯಾವುದೋ ಮುಟ್ಟಾಳಾ ಹಬ್ಬಿಸಿರುವ ಸುದ್ದಿ ಇರಬೇಕು. ಅಂತಹ ಯಾವುದೇ ಸಾಧ್ಯತೆ ಇಲ್ಲ ಎಂದು ಈಶ್ವರಪ್ಪ ಪ್ರತಿಕ್ರಿಯೆ ನೀಡಿದರು.

ಅಕ್ರಮ ಗಣಿಗಾರಿಕೆ ಅಂತಿಮ ವರದಿಯಲ್ಲಿ ಹೆಸರಿರುವ ರೆಡ್ಡಿ ಸಹೋದರರು ಹಾಗೂ ಸಚಿವ ವಿ.ಸೋಮಣ್ಣ ರಾಜೀನಾಮೆ ನೀಡಬೇಕು. ಅವರೆಲ್ಲರೂ ರಾಜೀನಾಮೆ ನೀಡುವುದು ಖಚಿತ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಪಕ್ಷದ ಹೈಕಮಾಂಡ್ ನಿಲುವಿಗೆ ಎಲ್ಲರೂ ಬದ್ಧರಾಗಿರಲೇಬೇಕು. ಹಾಗಾಗಿ ಪಕ್ಷದ ನಾಯಕತ್ವ ಬದಲಾವಣೆ, ಯಡಿಯೂರಪ್ಪ ರಾಜೀನಾಮೆ ನೀಡುವುದು ಖಚಿತ. ಅಲ್ಲದೇ ಮುಂದಿನ ನಡೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದರು.

ಆದರೆ ನಾವೆಲ್ಲರೂ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲಕ್ಕಿದ್ದು, ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮನವೊಲಿಸುವ ಕೆಲಸ ಮಾಡುವುದಾಗಿಯೂ ಹೇಳಿದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಈಶ್ವರಪ್ಪ, ಯಡಿಯೂರಪ್ಪ, ಬಿಜೆಪಿ, ಕಾಂಗ್ರೆಸ್, ಲೋಕಾಯುಕ್ತ ವರದಿ, ಹೈಕಮಾಂಡ್