ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮೊದಲು ರಾಜೀನಾಮೆ, ನಂತ್ರ ಮಾತುಕತೆ: ಯಡ್ಡಿಗೆ ಹೈಕಮಾಂಡ್ (BJP | Yeddyurappa | Lokayukta | Illegal Mining Report | Hicommond | Hegde)
PR
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಯಾವುದೇ ಮಾತುಕತೆ ಇಲ್ಲ. ರಾಜೀನಾಮೆ ನಂತರವಷ್ಟೇ ಅವರ ಷರತ್ತುಗಳನ್ನು ಪರಿಶೀಲಿಸಲಾಗುವುದು...ಇದು ಬಿಜೆಪಿ ಹೈಕಮಾಂಡ್ ತಳೆದಿರುವ ಸ್ಪಷ್ಟ ನಿಲುವು.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಅಕ್ರಮ ಗಣಿಗಾರಿಕೆ ವರದಿಗೆ ಸಂಬಂಧಿಸಿದಂತೆ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ಅಲ್ಲದೇ ಯಾವುದೇ ಕಾರಣಕ್ಕೂ ಸಚಿವರು, ಶಾಸಕರ ಸಭೆ ನಡೆಸದಂತೆಯೂ ನಿರ್ದೇಶನ ನೀಡಿತ್ತು.

ಏತನ್ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ಹೈಕಮಾಂಡ್ ಆದೇಶ ಧಿಕ್ಕರಿಸಿ ಸಚಿವರು,ಶಾಸಕರ ಸಭೆ ಕರೆದು ಅವರ ಅಭಿಪ್ರಾಯಗಳನ್ನು ಸಂಗ್ರಹಿಸುವ ನಿರ್ಧಾರಕ್ಕೆ ಮುಂದಾಗಿರುವುದು ಕೂಡ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗುವಂತಾಗಿದೆ. ಯಡಿಯೂರಪ್ಪನವರು ಮೊದಲು ರಾಜೀನಾಮೆ ಕೊಡಲಿ, ನಂತರ ಅವರ ಷರತ್ತುಗಳನ್ನು ಪರಿಶೀಲಿಸಲಾಗುವುದು ಎಂದು ಹೈಕಮಾಂಡ್ ಮೂಲಗಳು ತಿಳಿಸಿವೆ.

ಯಡಿಯೂರಪ್ಪ ಷರತ್ತುಗಳೇನು?
*ಮುಖ್ಯಮಂತ್ರಿಗಾದಿ ರಾಜೀನಾಮೆ ನಂತರ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕು.
*ತಾನು ಸೂಚಿಸುವ ವ್ಯಕ್ತಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು.
*ತಾನು ಸೂಚಿಸುವ ವ್ಯಕ್ತಿಗಳಿಗೆ ಸಚಿವ ಸ್ಥಾನ ನೀಡಬೇಕು.

ಒಟ್ಟಾರೆ ಯಡಿಯೂರಪ್ಪ ರಾಜೀನಾಮೆ ನೀಡುವವರೆಗೂ ಅವರ ಜತೆ ಯಾವುದೇ ಮಾತುಕತೆ ಇಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸುವ ಮೂಲಕ ಹೈಕಮಾಂಡ್ ಕೂಡ ಬಿಗು ನಿಲುವು ತಳೆದಿದೆ. ಮತ್ತೊಂದೆಡೆ ಯಡಿಯೂರಪ್ಪ ಅವರನ್ನು ಏಕಾಂಗಿಯನ್ನಾಗಿ ಮಾಡಲು ಹೈಕಮಾಂಡ್ ರಣತಂತ್ರ ರೂಪಿಸುತ್ತಿದೆ. ಅಂತೂ ಯಡಿಯೂರಪ್ಪ ರಾಜೀನಾಮೆ ನೀಡದಿರುವುದು ಬಿಜೆಪಿ ಹೈಕಮಾಂಡ್‌ಗೆ ಇಕ್ಕಟ್ಟಿಗೆ ಸಿಲುಕಿಸುವಂತೆ ಮಾಡಿದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಯಡಿಯೂರಪ್ಪ, ಲೋಕಾಯುಕ್ತ, ಅಕ್ರಮ ಗಣಿ ವರದಿ, ಹೈಕಮಾಂಡ್, ಸಂತೋಷ್ ಹೆಗ್ಡೆ