ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವರದಿ ರದ್ದುಪಡಿಸಿ: ಯಡಿಯೂರಪ್ಪ ಹೈಕೋರ್ಟ್ ಮೊರೆ (BJP | Yeddyurappa | Illegal Mining Report | Lokayukta | High court | Hegde)
ವರದಿ ರದ್ದುಪಡಿಸಿ: ಯಡಿಯೂರಪ್ಪ ಹೈಕೋರ್ಟ್ ಮೊರೆ
ಬೆಂಗಳೂರು, ಮಂಗಳವಾರ, 2 ಆಗಸ್ಟ್ 2011( 12:44 IST )
ಅಕ್ರಮ ಗಣಿ ವರದಿಯಿಂದ ತಲೆದಂಡ ಕೊಟ್ಟ ಬಿ.ಎಸ್.ಯಡಿಯೂರಪ್ಪ ಇದೀಗ ಲೋಕಾಯುಕ್ತರ ವರದಿಯನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಕ್ರಮ ಗಣಿ ಹಗರಣದ ಕುರಿತು ಲೋಕಾಯುಕ್ತರು ಸಲ್ಲಿಸಿರುವ ಅಂತಿಮ ವರದಿಯನ್ನು ರದ್ದುಪಡಿಸುವಂತೆ ಕೋರಿ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಲೋಕಾಯುಕ್ತರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಅಕ್ರಮ ಗಣಿ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ ಗಣಿ ಹಗರಣದ ಕುರಿತ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಅಂಶಗಳನ್ನು ಪ್ರಸ್ತಾಪಿಸಿಲ್ಲ. ಅಲ್ಲದೇ ಮುಖ್ಯಮಂತ್ರಿಗಳ ಹೇಳಿಕೆಯನ್ನೂ ಕೂಡ ಪಡೆದುಕೊಂಡಿಲ್ಲ ಎಂದು ಯಡಿಯೂರಪ್ಪ ತಮ್ಮ ರಿಟ್‌ನಲ್ಲಿ ತಿಳಿಸಿದ್ದಾರೆ.
ಆ ನಿಟ್ಟಿನಲ್ಲಿ ಲೋಕಾಯುಕ್ತ ವರದಿ ಅಸಮರ್ಪಕವಾಗಿದ್ದು, ಅದನ್ನು ರದ್ದುಪಡಿಸಬೇಕೆಂದು ಕೋರಿ ಹೈಕೋರ್ಟ್‌ನಲ್ಲಿ ರಿಟ್ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಬುಧವಾರ ನಡೆಯುವ ಸಾಧ್ಯತೆ ಇದೆ. ಟ್ಟಾರೆ ರಾಜ್ಯರಾಜಕಾರಣದ ಜಂಗೀಕುಸ್ತಿ ಮುಂದುವರಿದಿರುವ ನಡುವೆಯೇ ಯಡಿಯೂರಪ್ಪನವರು ಲೋಕಾಯುಕ್ತರ ಅಕ್ರಮ ಗಣಿ ವಿರುದ್ಧ ಕಾನೂನು ಸಮರ ಸಾರಿದ್ದಾರೆ.