ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗವರ್ನರ್ ಅಖಾಡಕ್ಕೆ: ಯಡ್ಡಿ ವಿರುದ್ಧ ಕ್ರಿಮಿನಲ್ ಕೇಸ್‌ಗೆ ಅಸ್ತು (Governor | Illegal Mining Report | Lokayukta | Criminal case | Yeddyurappa | BJP)
PR
ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಬಿ.ಎಸ್.ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ಬಣ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ, ಪ್ರೇರಣಾ ಟ್ರಸ್ಟ್‌ಗೆ ದೇಣಿಗೆ ಸಂದಾಯ ಹಾಗೂ ಲೋಕಾಯುಕ್ತ ವರದಿಯ ಚಾಪ್ಟರ್ 22ರಲ್ಲಿ ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಕ್ರಿಮಿನಲ್ ಕೇಸ್ ದಾಖಲಿಸಲು ಅನುಮತಿ ನೀಡುವ ಮೂಲಕ ಯಡಿಯೂರಪ್ಪ ಬಣಕ್ಕೆ ದೊಡ್ಡದೊಂದು ಶಾಕ್ ನೀಡಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಅಕ್ರಮ ಗಣಿಗಾರಿಕೆ ವರದಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಪ್ರಸ್ತಾವಾಗಿರುವ ನಿಟ್ಟಿನಲ್ಲಿ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಸರ್ಕಾರ ಬೀಳುವುದು, ನೂತನ ಸರ್ಕಾರ ರಚನೆಯಾಗುವುದು ಸಾಂವಿಧಾನಿಕ ಕ್ರಮ. ಅಲ್ಲದೇ ನೂತನ ಸರ್ಕಾರಕ್ಕೆ ಯಾವುದೇ ತೊಂದರೆ ಕೊಡಲ್ಲ ಎಂದು ಮಂಗಳವಾರ ಸುದ್ದಿಗಾರರ ಜತೆ ಮಾತನಾಡುತ್ತ ಗವರ್ನರ್ ಹೇಳಿಕೆ ನೀಡಿದ್ದರು. ಇದೀಗ ರಾಜ್ಯರಾಜಕಾರಣದ ಬಿಕ್ಕಟ್ಟಿನ ಸನ್ನಿವೇಶದಲ್ಲಿ ಹಂಸರಾಜ್ ಭಾರದ್ವಾಜ್ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಅನುಮತಿ ನೀಡುವ ಮೂಲಕ ಸಕ್ರಿಯವಾಗಿ ಅಖಾಡಕ್ಕಿಳಿದಿದ್ದಾರೆ.

1988 ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡ್ಡಿ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಪೊಲೀಸರಿಗೆ ರಾಜ್ಯಪಾಲರು ಅನುಮತಿ ಪತ್ರವನ್ನೂ ಬುಧವಾರ ಬೆಳಗ್ಗೆ ರವಾನಿಸಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಗವರ್ನರ್, ಅಕ್ರಮ ಗಣಿ ವರದಿ, ಲೋಕಾಯುಕ್ತ, ಕ್ರಿಮಿನಲ್ ಕೇಸ್, ಯಡಿಯೂರಪ್ಪ, ಬಿಜೆಪಿ