ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಷಡ್ಯಂತ್ರ ನಡೆಸ್ತಿದ್ದಾರೆ, ಕೋರ್ಟ್ ಉತ್ತರ ಕೊಡುತ್ತೆ: ಯಡಿಯೂರಪ್ಪ (BJP | Yeddyurappa | High court | Illegal Mining Report | Lokayukta | Sadananda Gowda)
PR
ಭದ್ರಾ ಮೇಲ್ದಂಡೆ ಕಾಮಗಾರಿ ಯೋಜನೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಲ್ಲ ರೀತಿಯಿಂದಲೂ ನನ್ನನ್ನು ಸಿಕ್ಕಿಸಲು ವ್ಯವಸ್ಥಿತ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಬುಧವಾರ ಶಿಕಾರಿಪುರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸದಾನಂದ ಗೌಡರಿಗೆ ಪೋಸ್ಟ್ ಮಾಸ್ಟರ್ ರೀತಿ ಮಾಹಿತಿ ನೀಡುವುದಾಗಿ ಈ ಸಂದರ್ಭದಲ್ಲಿ ಹೇಳಿದರು. ಆದರೆ ಸಚಿವ ಸಂಪುಟ ರಚನೆ ಸೇರಿದಂತೆ ಯಾವುದೇ ವಿಚಾರದಲ್ಲೂ ಮೂಗು ತೂರಿಸುವುದಿಲ್ಲ ಎಂದರು.

ತಾವು ಮುಖ್ಯಮಂತ್ರಿಯಾಗಿದ್ದ ವೇಳೆ ಅಕ್ರಮ ಗಣಿಗಾರಿಕೆ ತಡೆಯಲು ಕೈಗೊಂಡ ನಿರ್ಧಾರದ ಬಗ್ಗೆ ಸರ್ವೋಚ್ಛನ್ಯಾಯಾಲಯವೇ ಮೆಚ್ಚುಗೆ ವ್ಯಕ್ತಪಡಿಸಿತ್ತು. ಆದರೆ ಲೋಕಾಯುಕ್ತರ ವರದಿಯಲ್ಲಿ ಆ ಬಗ್ಗೆ ಎಲ್ಲಿಯೂ ಪ್ರಸ್ತಾಪಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಲ್ಲ ವಿಚಾರಗಳಲ್ಲಿಯೂ ನನ್ನನ್ನೇ ದುರುದ್ದೇಶ ಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಈ ಬಗ್ಗೆ ನ್ಯಾಯಾಲಯಗಳೇ ತಕ್ಕ ಉತ್ತರ ನೀಡಲಿವೆ. ತಮ್ಮ ಮೇಲಿನ ಆರೋಪದ ಕುರಿತು ಈಗಾಗಲೇ ನ್ಯಾಯಾಲಯದಲ್ಲಿ ಪ್ರಕ್ರಿಯೆ ಆರಂಭವಾಗಿರುವುದರಿಂದ ತಾವು ಆ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.

ಹಾಗಂತ ನಾನು ನನ್ನ ಕೆಲಸ ನಿಷ್ಠೆಯಿಂದ ಮುಂದುವರಿಸುತ್ತೇನೆ. ಯಾವುದೇ ಆರೋಪದ ಬಗ್ಗೆಯೂ ತಲೆಕೆಡಿಸಿಕೊಳ್ಳಲು ಹೋಗುವುದಿಲ್ಲ. ನಾನು ಎಲ್ಲಿಯವರೆಗೂ ಪ್ರಾಮಾಣಿಕನಾಗಿರುತ್ತೇನೋ ಅಲ್ಲಿಯವರೆಗೂ ಹೆದರಬೇಕಾದ ಅಗತ್ಯ ಇಲ್ಲ ಎಂದು ವಿಶ್ಲೇಷಿಸಿದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಯಡಿಯೂರಪ್ಪ, ಹೈಕೋರ್ಟ್, ಅಕ್ರಮ ಗಣಿ, ಲೋಕಾಯುಕ್ತ, ಸದಾನಂದ ಗೌಡ