ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೌಡ್ರ ಕುಟುಂಬಕ್ಕೆ ತಕ್ಕ ಪಾಠ ಕಲಿಸದೇ ಬಿಡಲ್ಲ: ಯಡಿಯೂರಪ್ಪ (BJP | Yeddyurappa | Deve gowda | Kumaraswamy | JDS | Illegal Mining Report)
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕುಟುಂಬ ದುರುದ್ದೇಶದಿಂದ ನನ್ನ ತೇಜೋವಧೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಇನ್ಮುಂದೆ ಗೌಡರ ಕುಟುಂಬ ನನ್ನ ತೇಜೋವಧೆಗೆ ಮುಂದಾದ್ರೆ ಸಹಿಸಿಕೊಳ್ಳೋದಿಲ್ಲ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಗುರುವಾರ ಹಾಸನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಕಾಮಗಾರಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಆದರೆ ಎಲ್ಲದರಲ್ಲೂ ನನ್ನ ಸಿಕ್ಕಿಹಾಕಿಸಲು ಗೌಡರ ಕುಟುಂಬ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು.

ನನ್ನ ಮೇಲೆ ಯಾವುದೇ ಆರೋಪ ಹೊರಿಸಲಿ ನನಗೆ ರಾಜ್ಯದ, ದೇಶದ ನ್ಯಾಯಾಲಯಗಳ ಮೇಲೆ ನಂಬಿಕೆ ಇದೆ. ಅಲ್ಲಿ ಸತ್ಯಾಸತ್ಯತೆ ಬಯಲಾಗಲಿದೆ ಎಂಬುದಾಗಿ ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ ದೇವೇಗೌಡರ ಕುಟುಂಬಕ್ಕೆ ತಕ್ಕ ಪಾಠ ಕಲಿಸುವುದಾಗಿ ಗುಡುಗಿದರು.

ಏತನ್ಮಧ್ಯೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಿಕ್ಕಮಗಳೂರು ಸಮೀಪದ ಬಾಳೇಹೊನ್ನೂರಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಹಲವು ಶಾಸಕರು ಯಡಿಯೂರಪ್ಪನವರಿಗೆ ಸಾಥ್ ನೀಡಿದ್ದರು.

ತಾನು ರಂಭಾಪುರಿ ಮಠದ ವೀರಭದ್ರ ಸ್ವಾಮಿ ಸನ್ನಿಧಿಯಲ್ಲಿ ಮೂರು ಸಂಕಲ್ಪ ಮಾಡಿರುವುದಾಗಿ ಸುದ್ದಿಗಾರರ ಜತೆ ಮಾತನಾಡುತ್ತ ಹೇಳಿದರು. ತನ್ನ ಮೇಲಿನ ಆರೋಪಗಳ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಯಡಿಯೂರಪ್ಪ, ದೇವೇಗೌಡ, ಕುಮಾರಸ್ವಾಮಿ, ಜೆಡಿಎಸ್, ಅಕ್ರಮ ಗಣಿಗಾರಿಕೆ ವರದಿ