ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಎಸ್‌ವೈರಿಂದ ಚೆಕ್ ಮೂಲಕ ಬಿಜೆಪಿ ವರಿಷ್ಠರಿಗೆ ಹಣ: ಎಚ್‌ಡಿಕೆ (BJP | Yeddyurappa | Kumaraswamy | JDS | Lokayukta | Illegal Mining Report | Mysore)
WD
ತುಂಗಭದ್ರಾ ಮೇಲ್ದಂಡೆ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚೆಕ್ ಮೂಲಕ ಬಿಜೆಪಿಯ ಮೂವರು ವರಿಷ್ಠರಿಗೆ ಹಣ ಸಂದಾಯ ಮಾಡಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಗೆ ಕಾಂಗ್ರೆಸ್ಸಿಗರೇ ಮೂಲ ಕಾರಣ. ಆದರೆ ಯಡಿಯೂರಪ್ಪ ಕಾಂಗ್ರೆಸ್ಸಿಗರ ರಕ್ಷಣೆಗೆ ಹೋಗಿ ತಾವೇ ಸಿಕ್ಕಿಬಿದ್ದಿದ್ದಾರೆ ಎಂದು ವ್ಯಂಗ್ಯವಾಡಿದರು.

ತಮ್ಮ ಅಕ್ರಮಗಳನ್ನು ಮುಚ್ಚಿಕೊಳ್ಳಲು ಯಡಿಯೂರಪ್ಪ ಬಿಜೆಪಿ ವರಿಷ್ಠರಿಗೆ ಹಣ ಸಂದಾಯ ಮಾಡಿರುವುದಾಗಿ ದೂರಿದ ಕುಮಾರಸ್ವಾಮಿ ಈ ಬಗ್ಗೆ ಶೀಘ್ರದಲ್ಲೇ ದಾಖಲೆ ಬಿಡುಗಡೆ ಮಾಡುವುದಾಗಿಯೂ ಹೇಳುವ ಮೂಲಕ ಮತ್ತೊಂದು ಸುತ್ತಿನ ರಾಜಕೀಯ ಕೆಸರೆರಚಾಟಕ್ಕೆ ಮುಂದಾಗಿದ್ದಾರೆ.

ಅಕ್ರಮ ಗಣಿಗಾರಿಕೆ ಹಗರಣ ತನಿಖೆಯಾಗಲು ನಾನೇ ಕಾರಣ. ಆದರೆ ಈ ಹಗರಣದ ಬಗ್ಗೆ ಮತ್ತಷ್ಟು ಸಮಗ್ರವಾಗಿ ತನಿಖೆ ನಡೆಸಿದ್ದೇ ಆದಲ್ಲಿ ಬಿಜೆಪಿ ಮುಖಂಡರ ಬಣ್ಣ ಬಯಲಾಗಲಿದೆ ಎಂದರು.

ಲೋಕಾಯುಕ್ತ ವರದಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ಜಂತಕಲ್ ಮೈನಿಂಗ್ ಕಂಪನಿಗೆ ಅನುಮತಿ ನೀಡಿರುವ ಕುರಿತಂತೆ ತಾವು ಆ ಬಗ್ಗೆ ಇನ್ನೆರಡು ದಿನದಲ್ಲಿ ಪೂರ್ಣ ಸ್ಪಷ್ಟನೆ ನೀಡುವುದಾಗಿ ಹೇಳಿದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಯಡಿಯೂರಪ್ಪ, ಕುಮಾರಸ್ವಾಮಿ, ಜೆಡಿಎಸ್, ಲೋಕಾಯುಕ್ತ, ಅಕ್ರಮ ಗಣಿಗಾರಿಕೆ, ಮೈಸೂರು