ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಇದೀಗ ಹವಾಲಾ ಹಗರಣದಲ್ಲಿ ಯಡಿಯೂರಪ್ಪ-ಶೋಭಾ? (hawala scam | Shobha Karandlaje | Yeddyurappa | ED | Sadananda Gowda | Hong Kong)
PTI
ಅಕ್ರಮ ಗಣಿಗಾರಿಕೆ, ಭೂ ಹಗರಣ, ಭದ್ರಾ ಮೇಲ್ದಂಡೆ ಅವ್ಯವಹಾರ ಪ್ರಕರಣದಲ್ಲಿ ಸಿಲುಕಿರುವ ವಿವಾದಿತ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಇದೀಗ ಅಂತಾರಾಷ್ಟ್ರೀಯ ಮಟ್ಟದ ಹವಾಲಾ ಹಗರಣದ ಆರೋಪ ಸುತ್ತಿಕೊಂಡಿದ್ದು, ಇದರಲ್ಲಿ ಯಡಿಯೂರಪ್ಪ ಆಪ್ತ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಕೂಡ ತಳುಕುಹಾಕಿಕೊಂಡಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಇಂಧನ ಸಚಿವೆ ಶೋಭಾ ಕರಂದ್ಲಾಜೆ ವ್ಯವಹಾರಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಜಾರಿ ನಿರ್ದೇಶನಾಲಯ (ಎನ್‌ಪೋರ್ಸ್‌ಮೆಂಟ್ ಡೈರೆಕ್ಟರೇಟ್) ತನಿಖೆ ನಡೆಸುತ್ತಿದ್ದು, ಇವರ ಅಂತಾರಾಷ್ಟ್ರೀಯ ಮಟ್ಟದ ಹವಾಲ ಹಗರಣ ಬಯಲಾಗಿದೆ.

ಯಡಿಯೂರಪ್ಪ ಈಗಾಗಲೇ ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಶಾಮೀಲಾಗಿರುವುದಾಗಿ ತಿಳಿಸಿರುವ ಜಾರಿ ನಿರ್ದೇಶನಾಲಯ, ಅವರ ಎಲ್ಲ ವ್ಯವಹಾರಗಳ ಮೇಲೆ ಕಣ್ಣಿಟ್ಟಿರುವುದಾಗಿ ತಿಳಿಸಿದ್ದು, ಅದಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಕಲೆ ಹಾಕಿರುವುದಾಗಿ ಹೇಳಿದೆ. ಅಲ್ಲದೇ ಇದರಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಕೂಡ ಪಾಲುದಾರರಾಗಿದ್ದು, ಮೊದಲ ಬಾರಿಗೆ ಶೋಭಾ ಹೆಸರು ಅಂತಾರಾಷ್ಟ್ರೀಯ ಮಟ್ಟದ ಹಗರಣಗಳಲ್ಲಿ ಸಿಲುಕಿದಂತಾಗಿದೆ.

PR
ಶೋಭಾ ಕರಂದ್ಲಾಜೆ ಹಿಂದೆ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿಯೂ ಇಂಧನ ಸಚಿವೆಯಾಗಿದ್ದು, ಇದೀಗ ನೂತನ ಮುಖ್ಯಮಂತ್ರಿ ಸದಾನಂದ ಗೌಡರ ಸಂಪುಟದಲ್ಲಿಯೂ ಇಂಧನ ಸಚಿವೆ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯದ ಮಾಹಿತಿ ಪ್ರಕಾರ, ಯಡಿಯೂರಪ್ಪನವರು ದುಬೈ ಮತ್ತು ಹಾಂಗ್‌ಕಾಂಗ್ ಬ್ಯಾಂಕ್‌ಗಳಲ್ಲಿ ಹಲವಾರು ಖಾತೆಗಳನ್ನು ಹೊಂದಿದ್ದು, ಅವರು ರಿಯಲ್ ಎಸ್ಟೇಟ್ ಹಾಗೂ ಆಸ್ಪತ್ರೆ ನಿರ್ಮಾಣ ಮಾಡುವ ಮೂಲಕ ಹಣ ಹೂಡುತ್ತಿರುವುದಾಗಿ ವಿವರಿಸಿದೆ.

ಅಲ್ಲದೇ ಬೆಂಗಳೂರಿನ ಒಂದು ಬ್ಯಾಂಕ್ ಖಾತೆಯಿಂದ ವಿದೇಶದಲ್ಲಿರುವ ತನ್ನ ಖಾತೆಗಳಿಗೆ ಹಣ ವರ್ಗಾವಣೆ ಮಾಡಿರುವ ಬಗ್ಗೆ ದಾಖಲೆಗಳು ದೊರೆತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಯಡಿಯೂರಪ್ಪ ಪುತ್ರರಾದ ಬಿ.ವೈ.ರಾಘವೇಂದ್ರ ಮತ್ತು ಬಿವೈ ವಿಜಯೇಂದ್ರ ಶಾಮೀಲಾಗಿದ್ದಾರೆ. ಫೈವ್ ಸ್ಟಾರ್ ಹೋಟೆಲ್, ರೆಸಾರ್ಟ್ ಸೇರಿದಂತೆ ಅನೇಕ ಉದ್ಯಮಗಳನ್ನು ಅವರು ನಡೆಸುತ್ತಿದ್ದಾರೆ.

ಪ್ರಕರಣದ ಬಗ್ಗೆ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ, ಯಡಿಯೂರಪ್ಪ ಮತ್ತು ಅವರ ಆಪ್ತರ ವಿರುದ್ಧ ತೆರಿಗೆ ವಂಚನೆ ತಡೆ ಕಾಯ್ದೆ ಮತ್ತು ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ ಅನ್ವಯ ದೂರು ದಾಖಲಿಸುವ ಸಾಧ್ಯತೆ ಇದೆ.

ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ದುಬೈ ಮತ್ತು ಹಾಂಗ್‌ಕಾಂಗ್‌ಗೆ ಆಗಾಗ ಭೇಟಿ ನೀಡುವ ಮೂಲಕ ತಮ್ಮ ಕಂಪನಿಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಆದರೆ ಈ ಆರೋಪದ ಬಗ್ಗೆ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಯಾವುದೇ ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ಮಿಡ್ ಡೇ ವರದಿ ತಿಳಿಸಿದ್ದು, ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಯಾವುದೇ ನೋಟಿಸ್ ಅಥವಾ ಮಾಹಿತಿ ಬಂದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ವಕ್ತಾರ ಆರ್.ಪಿ.ಜಗದೀಶ್ ತಿಳಿಸಿದ್ದಾರೆ ಎಂದು ವಿವರಿಸಿದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಸದಾನಂದ ಗೌಡ, ಲೋಕಾಯುಕ್ತ, ಹವಾಲಾ ರಾಕೆಟ್, ಇಡಿ