ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಣ್ಣಾ ಸ್ಫೂರ್ತಿ-ಗುರುವಾರದಿಂದ ಅಹೋರಾತ್ರಿ ಧರಣಿ: ಯಡ್ಡಿ (BJP | Yeddyurappa | Anna Hazare | siddaramaiah | Lokpal bill | Lokayukta)
PR
ಹಿರಿಯ ಗಾಂಧಿವಾದಿ, ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹೋರಾಟದಿಂದ ಸ್ಫೂರ್ತಿ ಪಡೆದಿದ್ದೇನೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರದಿಂದ ಎಂ.ಜಿ.ರಸ್ತೆಯ ಗಾಂಧಿ ಪ್ರತಿಮೆ ಬಳಿ ಅಹೋರಾತ್ರಿ ಧರಣಿ ನಡೆಸುವುದಾಗಿ ಘೋಷಿಸಿದ್ದಾರೆ.

<linkstart href='http://kannada.webdunia.com' target=_blank>ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಭ್ರಷ್ಟಾಚಾರದ ವಿರುದ್ಧ ಅಣ್ಣಾ ಹಜಾರೆ ನಡೆಸುತ್ತಿರುವ ಹೋರಾಟಕ್ಕೆ ತಾನು ಬೆಂಬಲ ನೀಡುವುದಾಗಿ ತಿಳಿಸಿರುವ ಅವರು, ಗುರುವಾರದಿಂದ ಪಕ್ಷಾತೀತ ಹೋರಾಟ ನಡೆಸಲು ತೀರ್ಮಾನಿಸಿರುವುದಾಗಿ ಟಿವಿ9 ಚಾನೆಲ್ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ಪಕ್ಷಾತೀತ ಹೋರಾಟ ನಡೆಸಬೇಕು ಎಂಬುದು ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಅವರ ಅಪೇಕ್ಷೆಯಾಗಿದ್ದು, ಈ ಕುರಿತು ನಾನು ಅವರೊಂದಿಗೆ ಚರ್ಚಿಸಿದ್ದೇನೆ. ಹಾಗಾಗಿ ಕೇಂದ್ರ ಸರ್ಕಾರ ಜನಲೋಕಪಾಲ್ ಮಸೂದೆಯನ್ನು ಅಣ್ಣಾ ಹಜಾರೆ ತಂಡದ ಕರಡಿನಂತೆಯೇ ರೂಪಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ಏತನ್ಮಧ್ಯೆ ಹಲವು ಭ್ರಷ್ಟಾಚಾರದ ಆರೋಪಗಳಲ್ಲಿ ಸಿಲುಕಿರುವ ನೀವೇ ಹೋರಾಟ ನಡೆಸುತ್ತಿರುವುದು ವಿಪರ್ಯಾಸ ಎಂದು ಕಾಂಗ್ರೆಸ್ ನಾಯಕರು ವ್ಯಂಗ್ಯವಾಡಿದ್ದಾರಲ್ಲ ಎಂಬ ಪ್ರಶ್ನೆಗೆ, ನಾನು ಕಾಂಗ್ರೆಸ್ ನಾಯಕರಿಂದ ಯಾವುದೇ ಪಾಠ ಕಲಿಯಬೇಕಾಗಿಲ್ಲ. ಕಾಂಗ್ರೆಸ್ಸಿಗರಿಗೆ ಹೋರಾಟದ ಮೇಲೆ ನಂಬಿಕೆ ಇಲ್ಲ ಎಂಬುದಕ್ಕೆ ಪ್ರಸ್ತುತ ನಡೆಯುತ್ತಿರುವ ಘಟನೆಯೇ ಸಾಕ್ಷಿಯಾಗಿದೆ ಎಂದರು.

ದೇಶದಲ್ಲಿ ಭ್ರಷ್ಟಾಚಾರ ಒಂದು ಪಿಡುಗಾಗಿದೆ. ಭ್ರಷ್ಟಾಚಾರ ಕೇವಲ ಯಾವುದೇ ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ. ಆದರೆ ಭ್ರಷ್ಟಾಚಾರ ನಿಗ್ರಹದ ಹೋರಾಟಕ್ಕೆ ಕಾಂಗ್ರೆಸ್ ನಾಯಕರೇ ಅಡ್ಡಿಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪ ನಾಟಕ, ಜನ ನಂಬೋಲ್ಲ-ಸಿದ್ದರಾಮಯ್ಯ ವ್ಯಂಗ್ಯ:
ಭ್ರಷ್ಟಾಚಾರದ ವಿರುದ್ಧ ಅಣ್ಣಾ ಹಜಾರೆ ನಡೆಸುತ್ತಿರುವ ಹೋರಾಟದಿಂದ ಸ್ಫೂರ್ತಿ ಪಡೆದಿರುವುದಾಗಿ ಹೇಳಿ ನಾಳೆಯಿಂದ ಅಹೋರಾತ್ರಿ ಧರಣಿ ನಡೆಸುತ್ತೇನೆ ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನಿಜಕ್ಕೂ ಹಾಸ್ಯಾಸ್ಪದ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಸ್ವತಃ ಬಿ.ಎಸ್.ಯಡಿಯೂರಪ್ಪನವರೇ ಹಲವಾರು ಪ್ರಕರಣಗಳಲ್ಲಿ ಶಾಮೀಲಾಗಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲೂ ಅವರ ಹೆಸರು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖವಾಗಿದೆ. ಕೋರ್ಟ್‌ನಿಂದ ಸಮನ್ಸ್ ಜಾರಿಯಾಗಿದೆ. ಒಂದು ವೇಳೆ ಜಾಮೀನು ಸಿಗದಿದ್ದರೆ,ಯಡಿಯೂರಪ್ಪ ಜೈಲಿನಲ್ಲಿ ಇರಬೇಕಾಗುತ್ತದೆ ಎಂದಿರುವ ಸಿದ್ದು, ಯಡಿಯೂರಪ್ಪ ಹೊಸ ನಾಟಕ ಆಡುತ್ತಿದ್ದಾರೆ ಎಂದರು.

ಯಡಿಯೂರಪ್ಪ ನಾಟಕವನ್ನು ಜನ ನಂಬೋದಿಲ್ಲ. ಇಂತಹ ಹಲವು ಗಿಮಿಕ್‌ಗಳನ್ನು ರಾಜ್ಯದ ಜನ ನೋಡಿದ್ದಾರೆ. ಯಡಿಯೂರಪ್ಪನವರ ಪಕ್ಷಾತೀತ ಹೋರಾಟಕ್ಕೆ ಯಾವುದೇ ಅರ್ಥವಿಲ್ಲ. ಆ ರೀತಿ ಹೋರಾಟ ನಡೆಸುವ ನೈತಿಕ ಹಕ್ಕು ಅವರಿಗಿಲ್ಲ ಎಂದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಯಡಿಯೂರಪ್ಪ, ಅಣ್ಣಾ ಹಜಾರೆ, ಸಿದ್ದರಾಮಯ್ಯ, ಲೋಕಾಯುಕ್ತ, ಜನಲೋಕಪಾಲ್ ಮಸೂದೆ