ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಣ್ಣಾ ಸ್ಫೂರ್ತಿ: ಯಡಿಯೂರಪ್ಪ ಹೋರಾಟಕ್ಕೆ ಬಿಜೆಪಿಯಲ್ಲೇ ವಿರೋಧ (BJP | Yeddyurappa | Anna Hazare | Lokpal Bill | Bangalore | Nithin Gadkari)
ಭ್ರಷ್ಟಾಚಾರ ವಿರೋಧಿ ಹೋರಾಟ ನಡೆಸುತ್ತಿರುವ ಗಾಂಧಿವಾದಿ ಅಣ್ಣಾ ಹಜಾರೆ ಹೋರಾಟದಿಂದ ಸ್ಫೂರ್ತಿ ಪಡೆದಿರುವುದಾಗಿ ಹೇಳಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರದಿಂದ ನಗರದ ಗಾಂಧಿ ಪ್ರತಿಮೆ ಬಳಿ ಅಹೋರಾತ್ರಿ ಧರಣಿ ನಡೆಸಲು ನಿರ್ಧಾರಕ್ಕೆ ಬಿಜೆಪಿಯೊಳಗೇ ತೀವ್ರ ವಿರೋಧ ವ್ಯಕ್ತವಾಗಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ನಗರದ ಎಂಜಿ ರಸ್ತೆಯ ಗಾಂಧಿ ಪ್ರತಿಮೆ ಮುಂದೆ ಇಂದು ಬೆಳಿಗ್ಗೆ 10ಗಂಟೆಗೆ ಧರಣಿ ನಡೆಸುವುದಾಗಿ ಯಡಿಯೂರಪ್ಪ ಬುಧವಾರ ರಾತ್ರಿ ಘೋಷಿಸಿದ್ದ ಬೆನ್ನಲ್ಲೇ, ಪಕ್ಷದ ಹಿರಿಯ ಮಖಂಡರು ಅಸಮಾಧಾನ ವ್ಯಕ್ತಪಡಿಸಿ ವರಿಷ್ಠರಿಗೆ ದೂರು ನೀಡಿದ್ದಾರೆ ಎಂದು ಮೂಲವೊಂದು ತಿಳಿಸಿದೆ.

ಹಲವು ಆರೋಪಗಳನ್ನು ಎದುರಿಸುತ್ತಿರುವ ಯಡಿಯೂರಪ್ಪ ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನಿಗೆ ಕೋರ್ಟ್ ಕಟಕಟೆ ಏರಿದ್ದಾರೆ. ಇಂತಹವರು ಅಣ್ಣಾ ಹಜಾರೆ ಹೋರಾಟಕ್ಕೆ ಬೆಂಬಲ ಸೂಚಿಸಿ ಧರಣಿ ನಡೆಸುವುದರಲ್ಲಿ ಅರ್ಥವಿಲ್ಲ. ಇದರಿಂದ ಜನರ ಮುಂದೆ ಪಕ್ಷ ನಗೆಪಾಟಲಿಗೆ ಈಡಾಗಬೇಕಾಗುತ್ತದೆ ಎಂದು ದೂರಿದ್ದಾರೆ ಎನ್ನಲಾಗಿದೆ.

ಬಿಜೆಪಿ ಬಾವುಟ ಹಿಡಿದು ಪ್ರತಿಭಟನೆ ನಡೆಸಬಾರದು ಎಂದು ಪಕ್ಷ ಕಟ್ಟು ನಿಟ್ಟಾಗಿ ತಾಕೀತು ಮಾಡಿರುವ ಹಿನ್ನೆಲೆಯಲ್ಲಿ ದಿಢೀರ್ ರಾಗ ಬದಲಿಸಿರುವ ಯಡಿಯೂರಪ್ಪ ಪಕ್ಷಾತೀತವಾಗಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಪ್ರಕಟಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಯಡಿಯೂರಪ್ಪ, ಅಣ್ಣಾ ಹಜಾರೆ, ಜನಲೋಕಪಾಲ್ ಮಸೂದೆ, ಬೆಂಗಳೂರು, ನಿತಿನ್ ಗಡ್ಕರಿ