ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಣ್ಣಾ ಹೋರಾಟ: ಉರುಳು ಸೇವೆ, ಬಂದ್, ಬೀದಿಗಿಳಿದ ಯುವಶಕ್ತಿ (Anna Hazare | Lokpal Bill | Collage | Students | UPA | Bangalore)
ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜನಲೋಕಪಾಲ್ ಮಸೂದೆ ಜಾರಿಗಾಗಿ ಹೋರಾಟ ನಡೆಸುತ್ತಿರುವ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಅವರನ್ನು ಬೆಂಬಲಿಸಿ ನಗರದ ಫ್ರೀಡಂಪಾರ್ಕ್‌ನಲ್ಲಿ ನಡೆಸುತ್ತಿರುವ ನಿರಶನ ಗುರುವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯಾದ್ಯಂತ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ಬೆಂಬಲ ನೀಡಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಮಳೆಯೇ ನಡುವೆಯೂ ಇಂದು ಫ್ರೀಡಂಪಾರ್ಕ್‌ನಲ್ಲಿ ಅಣ್ಣಾ ಹೋರಾಟ ಬೆಂಬಲಿಸಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಚಿತ್ರನಟ ಶಿವರಾಜ್ ಕುಮಾರ್ ಕೂಡ ಪ್ರತಿಭಟನೆಗೆ ಬೆಂಬಲ ಘೋಷಿಸಿದ್ದಾರೆ. ಅಣ್ಣಾ ಹೋರಾಟಕ್ಕೆ ನಮ್ಮ ಬೆಂಬಲ, ಭ್ರಷ್ಟಾಚಾರ ತೊಲಗಿಸಿ, ಜನಲೋಕಪಾಲ್ ಮಸೂಜೆ ಜಾರಿ ಇಂದಲ್ಲದಿದ್ದರೆ, ಮುಂದೆ ಇನ್ಯಾವಾಗಾ...ಹೀಗೆ ಹತ್ತು ಹಲವಾರು ರೀತಿಯ ಭಿತ್ತಿಪತ್ರಗಳು ಪ್ರತಿಭಟನಾಕಾರರ ಕೈಯಲ್ಲಿ ರಾರಾಜಿಸುತ್ತಿವೆ.

ಅದೇ ರೀತಿ ಹಾಸನದಲ್ಲಿ ಅಣ್ಣಾ ಹಜಾರೆ ಹೋರಾಟ ಬೆಂಬಲಿಸಿ ಜನರು ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ತಮ್ಮ ಬೆಂಬಲ ಸೂಚಿಸಿದ್ದಾರೆ. ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಾಥ್ ನೀಡಿದ್ದಾರೆ.

ಬೀದರ್‌ನಲ್ಲಿ ಜಿಲ್ಲಾ ವಕೀಲರ ಸಂಘದಿಂದ ಧರಣಿ, ಗುಲ್ಬರ್ಗಾದಲ್ಲಿ ವಿದ್ಯಾರ್ಥಿಗಳು ಗಾಂಧಿ ಟೋಪಿ ಧರಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಗುಲ್ಬರ್ಗಾದ ಕನ್ನಡ ಪರ ಸಂಘಟನೆ ಸದಸ್ಯರು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ಜನಲೋಕಪಾಲ್ ಮೂಸೂದೆಯನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳಲೇಬೇಕು ಎಂದು ಒತ್ತಾಯಿಸಿದರು.ಚನ್ನಪಟ್ಟಣದಲ್ಲಿ ಪ್ರತಿಭಟನಾಕಾರರು ಉರುಳುಸೇವೆ ಮಾಡುವ ಮೂಲಕ ಅಣ್ಣಾ ಹೋರಾಟಕ್ಕೆ ಬೆಂಬಲ ನೀಡಿದರು. ರಾಯಚೂರಿನಲ್ಲಿಯೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೀದಿಗಿಳಿದು ಹೋರಾಟ ನಡೆಸುವ ಮೂಲಕ ತಮ್ಮ ಬೆಂಬಲ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ನಾಗರಿಕರನ್ನು ಪೊಲೀಸರು ಬಂಧಿಸಿದ್ದಾರೆ.

ಅಲ್ಲದೇ ದಾವಣಗೆರೆ ಸಿದ್ದಗಂಗಾ ಕಾಲೇಜಿನಲ್ಲಿ 650 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೆಳಗ್ಗೆ 8-30ರಿಂದ ಸಂಜೆ 6-30ರವರೆಗೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಮೈಸೂರಿನ ಗಾಂಧಿ ವೃತ್ತದ ಬಳಿ ವಿವೇಕಾನಂದ ಮೂವ್‌ಮೆಂಟ್ ನಡೆಸುತ್ತಿರುವ ನಿರಶನ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಜೈನ್ ಮಹಿಳೆಯರು ಕೂಡ ಸಾಥ್ ನೀಡಿದ್ದಾರೆ. ಕೊಪ್ಪಳದಲ್ಲಿ ಜಯಕರ್ನಾಟಕ ಸಂಘದ ಸದಸ್ಯರು ಅಣ್ಣಾ ಹಜಾರೆ ಮುಖವಾಡ ಧರಿಸಿ ಬೆಂಬಲ ಸೂಚಿಸಿ ಅಶೋಕ ವೃತ್ತದಿಂದ ಮೆರವಣಿಗೆ ನಡೆಸಿದರು. ದಾವಣಗೆರೆಯಲ್ಲಿಯೂ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಅಣ್ಣಾ ಹಜಾರೆ, ಜನಲೋಕಪಾಲ್ ಮಸೂದೆ, ಕಾಲೇಜು, ವಿದ್ಯಾರ್ಥಿಗಳು, ಯುಪಿಎ, ಬೆಂಗಳೂರು