ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಣ್ಣಾಗೆ ಬೆಂಬಲ ಕೊಟ್ರೆ ಸಿಬಿಐ ದಾಳಿ ನಡೆಸ್ತೇವೆ: ಕೇಂದ್ರ ಗುರೂಜಿಗೆ (Anna Hazare | Ravi shankar Shree | Lokpall Bill | Freedom park | UPA)
PR
ಭ್ರಷ್ಟಾಚಾರ ಮಟ್ಟಹಾಕಲು ಪ್ರಬಲ ಜನಲೋಕಪಾಲ್ ಮಸೂದೆ ಜಾರಿಯಾಗಬೇಕೆಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ, ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ನೀಡಿದ್ರೆ ಆಶ್ರಮದ ಮೇಲೆ ಸಿಬಿಐ ದಾಳಿ ನಡೆಸುವುದಾಗಿ ಕೇಂದ್ರ ಸರ್ಕಾರ ಬೆದರಿಕೆಗೆ ಹಾಕಿರುವುದಾಗಿ ಶ್ರೀರವಿಶಂಕರ್ ಗುರೂಜಿ ಗಂಭೀರವಾಗಿ ಆರೋಪಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ನಗರದ ಫ್ರೀಡಂಪಾರ್ಕ್‌ನಲ್ಲಿ ಅಣ್ಣಾ ಹಜಾರೆ ಹೋರಾಟವನ್ನು ಬೆಂಬಲಿಸಿ ಸಾವಿರಾರು ಮಂದಿ ಪ್ರತಿಭಟನೆ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಇಲ್ಲಿಗೆ ಆಗಮಿಸಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಈ ಆರೋಪ ಹೊರಿಸಿದ್ದಾರೆ.

ನೀವು ಒಂದು ವೇಳೆ ಅಣ್ಣಾ ಹಜಾರೆ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಕೊಟ್ರೆ, ನಾವು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮೇಲೆ ಸಿಬಿಐ ದಾಳಿ ನಡೆಸುತ್ತೇವೆ ಎಂದು ಕೇಂದ್ರ ಸರ್ಕಾರ ತನಗೆ ಬೆದರಿಕೆ ಹಾಕಿರುವುದಾಗಿ ದೂರಿದರು.

ಆದರೆ ನಾನು ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರದ ಬೆದರಿಕೆಗೆ ಜಗ್ಗುವ ಮನುಷ್ಯನಲ್ಲ. ಇಂತಹ ಗೊಡ್ಡು ಬೆದರಿಕೆಗೆ ಹೆದರುವ ಮನುಷ್ಯ ನಾನಲ್ಲ. ಅಣ್ಣಾ ಹಜಾರೆ ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇರುವುದಾಗಿ ಈ ಸಂದರ್ಭದಲ್ಲಿ ಘೋಷಿಸಿದರು.

ಕೇಂದ್ರ ಸರ್ಕಾರ ಧಮನಕಾರಿ ನೀತಿ ಅನುಸರಿಸುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದ ರವಿಶಂಕರ್ ಗುರೂಜಿ, ಏನೇ ಆದರೂ ನ್ಯಾಯಾಲಯದಲ್ಲಿ ಉತ್ತರ ನೀಡುವುದಾಗಿ ತಿರುಗೇಟು ನೀಡಿದರು.

ಜನಲೋಕಪಾಲ್ ಮಸೂದೆಗೆ ಆಗ್ರಹಿಸಿ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ನಡೆಸುವ ಮುನ್ನವೇ ದೆಹಲಿ ಪೊಲೀಸರು ಅವರನ್ನು ತಿಹಾರ್ ಜೈಲಿಗೆ ತಳ್ಳಿದ್ದರು. ಆದರೂ ಅಣ್ಣಾ ಕರೆ ನೀಡಿದಂತೆ ಆ.16ರಿಂದಲೇ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು. ಈ ಸಂದರ್ಭದಲ್ಲಿ ತಿಹಾರ್ ಜೈಲಿನಲ್ಲಿಯೇ ರವಿಶಂಕರ್ ಗುರೂಜಿ ಸೇರಿದಂತ ಹಲವಾರು ಗಣ್ಯರು ಅಣ್ಣಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಅಣ್ಣಾ ಹಜಾರೆ, ರವಿಶಂಕರ್ ಗುರೂಜಿ, ಜನಲೋಕಪಾಲ್, ಸಿಬಿಐ, ಫ್ರೀಡಂಪಾರ್ಕ್, ಯುಪಿಎ