ಭ್ರಷ್ಟಚಾರವನ್ನು ಹತ್ತಿಕ್ಕಲು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ನಡೆಸುತ್ತಿರುವ ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ತಿಳಿಸಿದ್ದಾರೆ.
ಈ ಸಂಬಂಧ ಒಂಬತ್ತು ಪ್ರಾದೇಶಿಕ ಪಕ್ಷಗಳ ಜತೆ ಸೇರಿ 23ರಂದು ರಾಷ್ಟ್ರವ್ಯಾಪಿ ಹೋರಾಟ ಕೈಗೊಳ್ಳುವುದಾಗಿ ದೇವೇಗೌಡರು ತಿಳಿಸಿದರು.
ಪ್ರತಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ, ಜನ ಲೋಕಪಾಲ ಮಸೂದೆ ಬಗ್ಗೆ ಇನ್ನೂ ಹೆಚ್ಚು ಚರ್ಚಿಸುವ ಅಗತ್ಯವಿದೆ. ಕೇಂದ್ರ ಸರಕಾರ ಅಣ್ಣಾ ಹೋರಾಟವನ್ನು ಗಂಭೀರವಾಗಿ ಪರಿಗಣಿಸಬೇಕು. ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕಾಗಿದೆ ಎಂದರು.
ಜನಲೋಕಪಾಲ ವಿಧೇಯಕ ಜಾರಿ ಆಗ್ರಹಿಸಿ ಹಜಾರೆ ಪಟತೊಟ್ಟು ನಿಂತಿದ್ದಾರೆ. ಭ್ರಷ್ಟಚಾರ ವಿರುದ್ಧ ಗಾಂಧಿವಾದಿ ಹಜಾರೆ ನಡೆಸುತ್ತಿರುವ ಹೊರಾಟಕ್ಕೆ ನಮ್ಮ ಬೆಂಬಲವಿದೆ ಎಂದರು.
ಇದೇ ಸಂದರ್ಭದಲ್ಲಿ ಲೋಕಪಾಲ ಮಸೂದೆ ಮಂಡನೆಗೆ ಸಂಬಂಧಿಸಿದಂತೆ ವಿಶೇಷ ಅಧಿವೇಶನವನ್ನು ಕರೆಯಬೇಕು ಎಂದು ಪ್ರಧಾನಿಯವರಿಗೆ ಮನವಿ ಮಾಡಿದರು.