ಡಿ ನೋಟಿಫಿಕೇಷನ್ ಪ್ರಕರಣದ ಕುರಿತು ಲೋಕಾಯುಕ್ತ ಪೊಲೀಸರು ಜಾರಿ ಮಾಡಿದ್ದ ಸಮನ್ಸ್ ಪ್ರಶ್ನಿಸಿ ಬಿ.ಎಸ್. ಯಡಿಯೂರಪ್ಪ ಹೈಕೋರ್ಟ್‌ಗೆ ರಿಟ್ ಸಲ್ಲಿಸಿದ್ದರು.
ಪ್ರಕರಣದ ಕುರಿತು ಬಿ.ಎಸ್.ಯಡಿಯೂರಪ್ಪ ಪರ ವಕೀಲರಾದ ಯು.ಆರ್.ಲಲಿತ್ ಅವರು, ತಮ್ಮ ಕಕ್ಷಿದಾರರಿಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕೆಂದು ಮನವಿ ಮಾಡಿಕೊಂಡರು. ಆದರೆ ಹೈಕೋರ್ಟ್ ನ್ಯಾಯಪೀಠ, ಸದ್ಯಕ್ಕೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಈ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 26ಕ್ಕೆ ನಡೆಸುವುದಾಗಿ ತಿಳಿಸಿ ಮುಂದೂಡಿತು.
ಅಲ್ಲದೇ ಭೂ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ದೂರು ಸಲ್ಲಿಸಿದ್ದ ಅರ್ಜಿದಾರ ವಕೀಲ ಸಿರಾಜಿನ್ ಭಾಷಾ ಅವರಿಗೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.