ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಮತ್ತೊಂದು ಎಫ್ಐಆರ್ (BJP | Yeddyurappa | Lokayukta | FIR | Court | Illegal Mining Report | Arrest)
PR
ರಾಚೇನಹಳ್ಳಿ ಜಮೀನು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ರಾಜ್ಯ ಲೋಕಾಯುಕ್ತ ಮತ್ತೊಂದು ಎಫ್ಐಆರ್ ದಾಖಲಿಸಿದೆ.

ಅಕ್ರಮ ಗಣಿಗಾರಿಕೆ ವರದಿಯ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರ ಸೂಚನೆ ಮೇರೆಗೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಯಡಿಯೂರಪ್ಪ, ಕುಟುಂಬ ಸೇರಿದಂತೆ ಇನ್ನಿತರರ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ತನಿಖೆ ನಡೆಸುವುದಾಗಿ ಲೋಕಾಯುಕ್ತ ಎಡಿಜಿಪಿ ಗಾಂವ್ಕರ್ ವಿವರಿಸಿದ್ದಾರೆ.

ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನ 1ನೇ ಆರೋಪಿಯನ್ನಾಗಿ, ಪುತ್ರ, ಸಂಸದ ಬಿ.ವೈ.ರಾಘವೇಂದ್ರ 2ನೇ ಆರೋಪಿ, ಎರಡನೇ ಪುತ್ರ ಬಿ.ವೈ.ವಿಜಯೇಂದ್ರ 3ನೇ ಆರೋಪಿ ಹಾಗೂ ಅಳಿಯ ಸೋಹನ್ ಕುಮಾರ್ ಅವರನ್ನು 4ನೇ ಆರೋಪಿಯನ್ನಾಗಿ ಮಾಡಲಾಗಿದೆ.

ಈ ನಾಲ್ವರ ವಿರುದ್ಧ ಪ್ರೇರಣಾ ಟ್ರಸ್ಟ್‌ಗೆ ಹತ್ತು ಕೋಟಿ ದೇಣಿಗೆ ನೀಡಿರುವ ಆರೋಪವನ್ನು ದಾಖಲಿಸಲಾಗಿದೆ ಹಾಗೂ ರಾಚೇನಹಳ್ಳಿ ಭೂ ವ್ಯವಹಾರದಲ್ಲಿ 20 ಕೋಟಿ ರೂಪಾಯಿ ಅವ್ಯವಹಾರವಾಗಿದೆ ಎಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಿರುವುದಾಗಿ ಗಾಂವ್ಕರ್ ತಿಳಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಸಂಬಂಧ ಯಡಿಯೂರಪ್ಪ ಮತ್ತು ಕುಟುಂಬದ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೊಂದು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸುವ ಮೂಲಕ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಯಡಿಯೂರಪ್ಪ, ಲೋಕಾಯುಕ್ತ, ಎಫ್ಐಆರ್, ಕೋರ್ಟ್, ಅಕ್ರಮ ಗಣಿ ವರದಿ, ಬಂಧನ