ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ವಿರುದ್ಧ ಆರೋಪಕ್ಕೆ ಮಠಾಧೀಶರ ಆಕ್ರೋಶ (BJP | Yeddyurappa | Illegal Mining Report | Lokayukta | Kumaraswamy | Anna Hazare)
ಭ್ರಷ್ಟಾಚಾರ ತಡೆಗಾಗಿ ಪ್ರಬಲ ಜನಲೋಕಪಾಲ್ ಮಸೂದೆ ಜಾರಿಯಾಗಬೇಕೆಂದು ಹೋರಾಟ ನಡೆಸುತ್ತಿರುವ ಅಣ್ಣಾ ಹಜಾರೆಗೆ ಬೆಂಬಲ ವ್ಯಕ್ತಪಡಿಸಿರುವ ಅಖಿಲ ಭಾರತ ಮಠಾಧಿಪತಿಗಳ ವಿಚಾರ ವೇದಿಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಆರೋಪ ಹೊರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಕೊಳದ ಮಠದ ಶ್ರೀಶಾಂತವೀರ ಸ್ವಾಮಿ ನೇತೃತ್ವದಲ್ಲಿ ವಿವಿಧ ಮಠಾಧೀಶರು ಬುಧವಾರ ಪತ್ರಿಕಾಗೋಷ್ಠಿ ನಡೆಸಿ, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತರ ವರದಿಯಲ್ಲಿ ಯಡಿಯೂರಪ್ಪ ವಿರುದ್ಧ ಆರೋಪ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಗಣಿಗಾರಿಕೆಗೆ ಸಂಬಂಧಿಸಿದ ಅವ್ಯವಹಾರಗಳಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಶಾಮೀಲಾಗಿದ್ದರೂ ಕೂಡ ಲೋಕಾಯುಕ್ತರು ಅವರ ವಿರುದ್ಧ ಕ್ರಮಕ್ಕೆ ಪ್ರಸ್ತಾಪಿಸಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಗಣಿಗಾರಿಕೆ ನಡೆಸಲು ಎರಡು ಕಂಪನಿಗಳಿಗೆ ಕಾನೂನು ಬಾಹಿರವಾಗಿ ಪರವಾನಿಗೆ ನೀಡಿದ್ದರೂ ಆ ಬಗ್ಗೆ ತನಿಖೆ ನಡೆಸಿಲ್ಲ. ಆದರೆ ಯಡಿಯೂರಪ್ಪ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಬೇಕೆಂದು ಶಿಫಾರಸು ಮಾಡಲಾಗಿದೆ. ಇದು ಸರಿಯಲ್ಲ ಎಂದು ಶಾಂತವೀರಸ್ವಾಮಿ ಹೇಳಿದರು.

ಎಲ್ಲಾ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ದೇಣಿಗೆ ಪಡೆಯುವುದು ಸಹಜ. ಅದೇ ರೀತಿ ಯಡಿಯೂರಪ್ಪ ಪಡೆದಿದ್ದು, ಸಾರ್ವಜನಿಕರಿಗೆ ಅನುಕೂಲ ಮಾಡಿದ್ದಾರೆ. ಆದರೆ ಅದನ್ನೇ ದೊಡ್ಡ ತಪ್ಪು ಎನ್ನುವಂತೆ ಮಾಡಲಾಗಿದೆ ಎಂದು ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ಚಿಕ್ಕಬಳ್ಳಾಪುರ ಶ್ರೀ ಶಿವ ಸಾಯಿಬಾಬಾ ಸ್ವಾಮಿ, ಮೈಸೂರಿನ ಬಸವಜ್ಞಾನ ಮಂದಿರದ ಶ್ರೀ ಮಾತಾ ಬಸವಾಂಜಲಿ, ಬಸವಧ್ಯಾನ ಪೀಠದ ಶ್ರೀ ಬಸವಲಿಂಗ ಸ್ವಾಮಿ, ಯಳನಾಡು ಸಂಸ್ಥಾನದ ಶ್ರೀ ಜ್ಞಾನಪ್ರಭು ಸಿದ್ದರಾಮ ದೇಶೀಕೇಂದ್ರ ಸ್ವಾಮಿ. ಕೊರಟಗೆರೆ ಶ್ರೀ ಬಸವಲಿಂಗಸ್ವಾಮಿ ಸೇರಿದಂತೆ ಅನೇಕ ಮಠಾಧೀಶರು ಪಾಲ್ಗೊಂಡಿದ್ದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಯಡಿಯೂರಪ್ಪ, ಅಕ್ರಮ ಗಣಿಗಾರಿಕೆ ವರದಿ, ಲೋಕಾಯುಕ್ತ, ಕುಮಾರಸ್ವಾಮಿ, ಮಠಾಧೀಶರು, ಅಣ್ಣಾ ಹಜಾರೆ