ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ವಿರುದ್ಧ ಎಫ್ಐಆರ್ ವಜಾಕ್ಕೂ ಹೈಕೋರ್ಟ್ ನಕಾರ (BJP | Yeddyurappa | High court | Governor | Lokayukta | Court | JDS)
PR
ಭದ್ರಾ ಮೇಲ್ದಂಡೆ ಕಾಮಗಾರಿ ಗುತ್ತಿಗೆ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ಶುಕ್ರವಾರ ತಿರಸ್ಕರಿಸುವ ಮೂಲಕ ಯಡಿಯೂರಪ್ಪ ಆಘಾತದ ಮೇಲೆ ಆಘಾತ ಅನುಭವಿಸುವಂತಾಗಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಭದ್ರಾ ಮೇಲ್ದಂಡೆ ಗುತ್ತಿಗೆ ಅವ್ಯವಹಾರ ಪ್ರಕರಣದ ಕುರಿತಂತೆ ಲೋಕಾಯುಕ್ತ ವಿಶೇಷ ಕೋರ್ಟ್ ವ್ಯಾಪ್ತಿಯನ್ನೇ ಪ್ರಶ್ನಿಸಿ ಎಫ್ಐಆರ್ ರದ್ದುಪಡಿಸುವಂತೆ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಲೋಕಾಯುಕ್ತ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಿರುವುದು ಕಾನೂನು ಸಮ್ಮತವಾಗಿದೆ. ಹಾಗಾಗಿ ತನಿಖೆಗೆ ತಡೆಯಾಜ್ಞೆ ನೀಡಲಾಗುವುದಿಲ್ಲ ಎಂದು ತಿಳಿಸಿದೆ. ಇದರಿಂದಾಗಿ ಯಡಿಯೂರಪ್ಪನವರ ಮೇಲೆ ಬಂಧನದ ತೂಗುಗತ್ತಿ ನೇತಾಡುವಂತಾಗಿದೆ.

2004-05ರಲ್ಲಿ ಕಾಮಗಾರಿ ಆರಂಭವಾದಾಗ 500 ಕೋಟಿ ರೂಪಾಯಿ ಮೀಸಲು ಇಡಲಾಗಿತ್ತು. ಪ್ರಸ್ತುತ ಕಾಮಗಾರಿ ವೆಚ್ಚವನ್ನು 1,300 ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಯಡಿಯೂರಪ್ಪ ಲಂಚ ಪಡೆದಿರುವುದಾಗಿ ಆರೋಪಿಸಿ ಜೆಡಿಎಸ್ ವಕ್ತಾರ ವೈಎಸ್‌ವಿ ದತ್ತ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ದೂರು ನೀಡಿದ್ದರು.

ದತ್ತಾ ನೀಡಿದ ದೂರಿನ ವಿಚಾರಣೆ ನಡೆಸಿದ್ದ ಲೋಕಾಯುಕ್ತ ವಿಶೇಷ ಕೋರ್ಟ್ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿತ್ತು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಯಡಿಯೂರಪ್ಪ, ಹೈಕೋರ್ಟ್, ರಾಜ್ಯಪಾಲ, ಲೋಕಾಯುಕ್ತ, ಕೋರ್ಟ್, ಜೆಡಿಎಸ್