ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ತಿರುಗುಬಾಣ: ಎಚ್‌ಡಿಕೆ ದಂಪತಿಗೆ ಜಾಮೀನು ಸಿಗುತ್ತಾ? (Kumaraswamy | Anitha kumaraswamy | High court | Illegal Mining | Lokayukta | Warrant | Yeddyurappa)
ತಿರುಗುಬಾಣ: ಎಚ್‌ಡಿಕೆ ದಂಪತಿಗೆ ಜಾಮೀನು ಸಿಗುತ್ತಾ?
ಬೆಂಗಳೂರು, ಭಾನುವಾರ, 28 ಆಗಸ್ಟ್ 2011( 14:51 IST )
PR
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪತ್ನಿ, ಶಾಸಕಿ ಅನಿತಾ ಕುಮಾರಸ್ವಾಮಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ ವಿಚಾರಣೆಯನ್ನು ಆಗಸ್ಟ್ 30ಕ್ಕೆ ಮುಂದೂಡಿದೆ.
ಜಂತಕಲ್ ಗಣಿ ಕಂಪನಿಗೆ ನಿಯಮ ಬಾಹಿರವಾಗಿ ಗಣಿಗಾರಿಕೆಗೆ ಗುತ್ತಿಗೆ ನೀಡಿರುವ ಆರೋಪದಲ್ಲಿ ಕುಮಾರಸ್ವಾಮಿ ಮತ್ತು ವಿಶ್ವಭಾರತಿ ಟ್ರಸ್ಟ್‌ನಿಂದ ನಿವೇಶನ ಪಡೆದಿರುವ ಆರೋಪದಲ್ಲಿ ಅನಿತಾಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.
ಈಗಾಗಲೇ ಕೆಐಎಡಿಬಿ ಪ್ರಕರಣದಲ್ಲಿ ಮಾಜಿ ಸಚಿವ ಸುಬ್ರಹ್ಮಣ್ಯ ನಾಯ್ಡು ಅವರಿಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜಾಮೀನು ತಿರಸ್ಕರಿಸಿತ್ತು. ಇದೀಗ ತಾವು ಇಕ್ಕಟ್ಟಿಗೆ ಸಿಲುಕುವ ಭಯದಿಂದ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಜಾಮೀನಿಗಾಗಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು.
ಒಟ್ಟಾರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿದ್ದ ಕುಮಾರಸ್ವಾಮಿ ಕೂಡ ಮಂಗಳವಾರ ಕಟಕಟೆಯಲ್ಲಿ ನಿಲ್ಲಬೇಕಾಗಿದೆ. ಅದೇ ರೀತಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ಕೂಡ ಅತಂತ್ರ ಸ್ಥಿತಿಯಲ್ಲಿದ್ದು, ಅವರು ಕೂಡ ಸೋಮವಾರ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಖುದ್ದು ಹಾಜರಾಗಲೇಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ.