ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೋರ್ಟ್ ವಿನಾಯ್ತಿ: ಕುಮಾರಸ್ವಾಮಿಗೆ ರಕ್ತದೊತ್ತಡ, ಅನಿತಾಗೆ ಬೆನ್ನುನೋವು! (Kumaraswamy | Anitha kumaraswamy | Lokayukta | Bangalore | Karnataka | Bail, | Kannada)
ಜಂತಕಲ್ ಮೈನಿಂಗ್ ಅವ್ಯವಹಾರ ಮತ್ತು ವಿಶ್ವಭಾರತಿ ಸೈಟ್ ಹಂಚಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕಿ, ಪತ್ನಿ ಅನಿತಾ ಕುಮಾರಸ್ವಾಮಿ ಖುದ್ದು ಹಾಜರಾತಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ಅನುಮತಿ ನೀಡಿ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡುವ ಮೂಲಕ ಎಚ್‌ಡಿಕೆ ದಂಪತಿಗೆ ಸ್ವಲ್ಪ ರಿಲೀಫ್ ಸಿಕ್ಕಂತಾಗಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಜಂತಕಲ್ ಮೈನಿಂಗ್ ಅವ್ಯವಹಾರ ಮತ್ತು ವಿಶ್ವಭಾರತಿ ಸೊಸೈಟಿ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಕೋರ್ಟ್ ಕಟಕಟೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಕುಮಾರಸ್ವಾಮಿ ದಂಪತಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅಲ್ಲದೇ ತಮ್ಮ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ಕೂಡ ತಿರಸ್ಕೃತವಾಗಿತ್ತು.

ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಬೇಕೆಂದು ಕೋರಿ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಕುಮಾರಸ್ವಾಮಿ ಪರ ವಕೀಲ ಅಶ್ಮದ್ ಪಾಷಾ ಅರ್ಜಿ ಸಲ್ಲಿಸಿದ್ದರು.

ಅಕ್ರಮ ಆಸ್ತಿ ಗಳಿಕೆ ಆರೋಪಿಸಿ ನ್ಯಾಯವಾದಿ ವಿನೋದ್ ಕುಮಾರ್ ಸಲ್ಲಿಸಿದ್ದ ಖಾಸಗಿ ದೂರು ಆಧರಿಸಿ ಲೋಕಾಯುಕ್ತ ವಿಶೇಷ ಕೋರ್ಟ್ ಆ.8ರಂದು ಎಚ್‌ಡಿಕೆ ದಂಪತಿಗೆ ಸಮನ್ಸ್ ಜಾರಿ ಮಾಡಿತ್ತು. ಬಂಧನದ ಭೀತಿಯಿಂದ ದಂಪತಿ ಲೋಕಾಯುಕ್ತ ಕೋರ್ಟ್‌ನಲ್ಲೇ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.

ಎಚ್‌ಡಿಕೆಗೆ ಹೃದಯ ಸಂಬಂಧಿ ಕಾಯಿಲೆ, ಅನಿತಾಗೆ ಬೆನ್ನು ನೋವು:
ಕುಮಾರಸ್ವಾಮಿಯವರು ತೀವ್ರ ಜ್ವರ, ಹೃದಯ ಸಂಬಂಧಿ ಕಾಯಿಲೆ, ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದಾರೆ. ಅದೇ ರೀತಿ ಅನಿತಾ ಕುಮಾರಸ್ವಾಮಿಯವರು ತೀವ್ರ ಬೆನ್ನು ನೋವು, ಸಂಧಿವಾತದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಇಬ್ಬರ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಬೇಕೆಂದು ಲೋಕಾಯುಕ್ತ ವಿಶೇಷ ಕೋರ್ಟ್ ನ್ಯಾಯಾಧೀಶರಲ್ಲಿ ವಕೀಲರು ಮನವಿ ಮಾಡಿಕೊಂಡರು.

ಅಷ್ಟೇ ಅಲ್ಲ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅನಾರೋಗ್ಯದ ಹಿನ್ನೆಲೆ ಮತ್ತು ಹೈಕೋರ್ಟ್‌ನಲ್ಲಿಯೂ ನಿರೀಕ್ಷಣಾ ಜಾಮೀನು ಸಲ್ಲಿಸುವ ಕಾರಣ ನೀಡಿ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಬೇಕೆಂದು ವಕೀಲರು ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡಿದ್ದರು.

ಈ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ಇಬ್ಬರ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದರು. ಕುಮಾರಸ್ವಾಮಿ ಮತ್ತು ಅನಿತಾಕುಮಾರಸ್ವಾಮಿ ಸೆಪ್ಟೆಂಬರ್ 5ಕ್ಕೆ ಖುದ್ದು ಹಾಜರಾಗಬೇಕೆಂದು ನ್ಯಾಯಾಧೀಶರು ಈ ಸಂದರ್ಭದಲ್ಲಿ ಸೂಚಿಸಿದರು.

ಪ್ರಕರಣದಲ್ಲಿ ಆರೋಪಿಯಾಗಿರುವ ಜಂತಕಲ್ ಮೈನಿಂಗ್ ಕಂಪನಿ ಮುಖ್ಯಸ್ಥ ವಿನೋದ್ ಗೋಯೆಲ್ ಕೂಡ ಅನಾರೋಗ್ಯದ ಕಾರಣ ನೀಡಿ ತಮ್ಮ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಬೇಕೆಂದು ಮನವಿ ಸಲ್ಲಿಸಿದ್ದು, ಆ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಲೋಕಾಯುಕ್ತ ಕೋರ್ಟ್, ಬೆಂಗಳೂರು, ಕರ್ನಾಟಕ, ಕನ್ನಡ