ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಉಪ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ಪಕ್ಷಗಳ ಚಾಲನೆ (By-election | Koppal | Congress | BJP | JDS | Candidate | Latest News in Kannada | Kannada News | Karnataka News | Latest Karnataka News)
PR
ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿವೆ. ಶುಕ್ರವಾರದಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ ಆಗಲಿದೆ.

`ಆಪರೇಷನ್ ಕಮಲ`ದಿಂದಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಜೆಡಿಎಸ್ ತ್ಯಜಿಸಿರುವ ಮಾಜಿ ಶಾಸಕ ಕರಡಿ ಸಂಗಣ್ಣ ಅವರು ಬಿಜೆಪಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಇನ್ನು ಕಾಂಗ್ರೆಸ್, ಜೆಡಿಎಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆದಿದೆ.

ಕಾಂಗ್ರೆಸ್‌ನಿಂದ ಬಸವರಾಜ ಹಿಟ್ನಾಳ್, ಜೆಡಿಎಸ್‌ನಿಂದ ಮಾಜಿ ಶಾಸಕ ವಿರೂಪಾಕ್ಷಗೌಡ ಮಾಲಿ ಪಾಟೀಲ ಅವರ ಪುತ್ರ ಪ್ರದೀಪ್‌ಗೌಡ, ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ, ಉದ್ಯಮಿ ಸೈಯ್ಯದ್ ಅವರ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ.

ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು 2-3 ದಿನಗಳಲ್ಲಿ ಪ್ರಕಟಿಸಲಾಗುವುದು. ಇಬ್ಬರು ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದು, ಅವರ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿ ಒಪ್ಪಿಗೆ ಪಡೆಯಲಾಗುವುದು. ಕಾಂಗ್ರೆಸ್ ಚುನಾವಣೆಗೆ ಸಿದ್ಧವಾಗಿದೆ. ಈಗಾಗಲೇ ಕೊಪ್ಪಳದಲ್ಲಿ ಎರಡು-ಮೂರು ಬಾರಿ ಸಭೆ ನಡೆಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದರು.

ಬುಧವಾರ ಇಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಭ್ರಷ್ಟಾಚಾರ ಪ್ರಕರಣಗಳು ಈ ಉಪಚುನಾವಣೆಯ ಪ್ರಮುಖ ವಿಷಯವಾಗಲಿದೆ.

ಬಿ.ಎಸ್. ಯಡಿಯೂರಪ್ಪ ಮತ್ತು ಎಚ್. ಡಿ.ಕುಮಾರಸ್ವಾಮಿ ಅವರ ಕಾನೂನುಬಾಹಿರ ಚಟುವಟಿಕೆಗಳು, ನ್ಯಾಯಾಲಯದ ಮೆಟ್ಟಿಲು ಹತ್ತಿರುವುದನ್ನು ಜನ ಗಮನಿಸುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದ್ದು, ಕೇಂದ್ರ ಸರ್ಕಾರ ನೀಡಿರುವ ಅನುದಾನವನ್ನು ಬಳಸಿಕೊಂಡಿಲ್ಲ ಎಂದು ಟೀಕಿಸಿದರು.

ಜೆಡಿಎಸ್ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರಾದ ಬಸನಗೌಡ ಪಾಟೀಲ ಯತ್ನಾಳ್, ಎಚ್.ಸಿ.ನೀರಾವರಿ ಸೇರಿದಂತೆ ನಾಲ್ವರ ತಂಡ ಇದೇ 4ರಂದು ಕೊಪ್ಪಳಕ್ಕೆ ತೆರಳಿ ಅಭ್ಯರ್ಥಿ ಆಯ್ಕೆ ಸಂಬಂಧ ಅಭಿಪ್ರಾಯ ಸಂಗ್ರಹಿಸಲಿದೆ ಎಂದು ಜೆಡಿಎಸ್ ವಕ್ತಾರ ವೈ.ಎಸ್.ವಿ.ದತ್ತ ತಿಳಿಸಿದರು.

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ವರದಿ ನೀಡಿದ ನಂತರ ಪಕ್ಷದ ಹಿರಿಯ ಮುಖಂಡರು ಬೆಂಗಳೂರಿನಲ್ಲಿ ಸಭೆ ಸೇರಿ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಿದ್ದಾರೆ ಎಂದರು.

ಡಿ.ವಿ.ಸದಾನಂದ ಗೌಡ ಅವರು ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ ಮೊದಲ ಉಪಚುನಾವಣೆ ಇದಾಗಿದೆ. ಸಹಜವಾಗಿಯೇ ಫಲಿತಾಂಶ ಏನಾಗುತ್ತದೆ ಎಂದು ಮೂರೂ ಪಕ್ಷಗಳಲ್ಲಿ ಕುತೂಹಲ ಇದೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಕೊಪ್ಪಳ, ಉಪ ಚುನಾವಣೆ, ಅಭ್ಯರ್ಥಿಗಳ ಆಯ್ಕೆ, ಕಸರತ್ತು, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ