ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಸಿಎಂ ಸದಾನಂದಗೌಡರ ಗಡುವಿಗೆ ಕ್ಯಾರೆ ಎನ್ನದ ಸಚಿವರು! (D V Sadananda Gowda | Administration | Cabinet colleagues | Deadline | Latest Karnataka News | Bangalore | Latest Political News in Karnataka)
PTI
ಅಡಳಿತ ಯಂತ್ರವನ್ನು ಚುರುಕುಗೊಳಿಸಲು 15 ದಿನಗಳ ಗಡುವಿನೊಳಗಾಗಿ ನೆನೆಗುದಿಯಲ್ಲಿರುವ ಎಲ್ಲಾ ಫೈಲ್‌ಗಳಿಗೆ ಮುಕ್ತಿ ನೀಡುವಂತೆ ಮುಖ್ಯಮಂತ್ರಿ ಸದಾನಂದ ಗೌಡ ಆದೇಶ ನೀಡಿದ್ದಾರೆ. ಆದರೆ, ಮುಖ್ಯಮಂತ್ರಿಗಳ ಆದೇಶಕ್ಕೆ ಸಚಿವರು ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಯಡಿಯೂರಪ್ಪ ಗುಂಪಿನ ಸಚಿವರು, ಸಿಎಂ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಕಳೆದ ತಿಂಗಳು ಮುಖ್ಯಮಂತ್ರಿಯಾಗಿ ಸದಾನಂದಗೌಡ ಅಧಿಕಾರ ಸ್ವೀಕರಿಸಿದ ನೂತನ ಸರಕಾರ ರಚಿಸಿದ ನಂತರ ವಿಧಾನಸೌಧದತ್ತ ತಲೆಹಾಕದ ಸಚಿವರು, ಇಲ್ಲಿಯವರೆಗೆ ಎರಡು ಬಾರಿ ಮಾತ್ರ ಸಂಪುಟ ಹಾಗೂ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ.

ಬಹುತೇಕ ಸಚಿವರು ಯುವಕರು ಹಾಗೂ ಮೊದಲ ಬಾರಿ ಸಚಿವರಾಗಿದ್ದರಿಂದ, ಸಚಿವ ಸ್ಥಾನದ ಸಂಭ್ರಮದಲ್ಲಿ ತೇಲಾಡಿ, ಕೇವಲ ಸನ್ಮಾನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದನ್ನು ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ 2008ರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಚಿವರು ವಿಧಾನಸೌಧದತ್ತ ಸುಳಿಯುತ್ತಿರಲಿಲ್ಲ. ಯಡಿಯೂರಪ್ಪ ಹಲವು ಬಾರಿ ಸಚಿವರಿಗೆ ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುವಂತೆ ನೀಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಗಮನದ ನಂತರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸದಾನಂದ ಗೌಡರನ್ನು ಗಂಭೀರವಾಗಿ ಪರಿಗಣಿಸದ ಸಚಿವರು, ಎಂದಿನಂತೆ ವಿಧಾನಸೌಧದಿಂದ ದೂರವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಡಿವಿಸದಾನಂದ ಗೌಡ, ಅಡಳಿತ ಯಂತ್ರ ಸಚಿವ ಸಂಪುಟ, ಗಡುವು, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ