ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಭಾರಿ ಲಾಬಿ (Priyanka kharge, Mallikarjun kharge, Kpcc, Election, Youth president, Congress | Latest News in Kannada | Kannada News | Karnataka News)
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣಾ ಕಾವು ಆರಂಭವಾಗಿದೆ.

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಲ್ವರು ಅಭ್ಯರ್ಥಿಗಳು ಮುಂಚೂಣಿಯಲ್ಲಿದ್ದು, ಜಾತ್ಯಾತೀತ ತತ್ವಕ್ಕೆ ಒತ್ತು ನೀಡಿರುವ ಕಾಂಗ್ರೆಸ್ಸಿನಲ್ಲಿ, ಚುನಾವಣೆ ಪದ್ದತಿ ಮಾತ್ರ ಜಾತಿ ಲೆಕ್ಕಾಚಾರದ ಆಧಾರದ ಮೇಲೆ ನಡೆಯುತ್ತಿದೆ.

ಕೇಂದ್ರ ಸಚಿವ ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ ಪ್ರಿಯಾಂಕಾ ಖರ್ಗೆ,ಹಾಲಿ ಅಧ್ಯಕ್ಷ ಕೃಷ್ಣ ಭೈರೆಗೌಡ ಬೆಂಬಲಿತ ಅಭ್ಯರ್ಥಿ ರಿಜ್ವಾನ್, ಪ್ರಬಲ ಲಿಂಗಾಯುತ ಸಮಾಜಾದ ಬಸವರಾಜ್ ಹಾಗೂ ಡಿ.ಕೆ.ಶಿವಕುಮಾರ್ ಬೆಂಬಲಿತ ಅಭ್ಯರ್ಥಿ ಶ್ರೀನಿವಾಸ ಅಧ್ಯಕ್ಷರಾಗಲು ಕಸರತ್ತು ಆರಂಭಿಸಿದ್ದಾರೆ.

ಯುವ ಕಾಂಗ್ರೆಸ್ ಚುನಾವಣಾ ಪ್ರಕ್ರಿಯೆಯನ್ನು ಸೆಪ್ಟೆಂಬರ್ ಕೊನೆಯ ವಾರದೊಳಗೆ ಮುಕ್ತಾಯಗೊಳಿಸುವಂತೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಈಗಾಗಲೇ ಸೂಚನೆ ನೀಡಿದ್ದಾರೆ.

ಕೆಪಿಸಿಸಿ ಚುನಾವಣಾಧಿಕಾರಿಗಳು ಸೆಪ್ಟೆಂಬರ್ 2 ರಂದು ಕಚೇರಿಗೆ ಭೇಟಿ ನೀಡಲಿದ್ದು, ಚುನಾವಣೆ ಪ್ರಕ್ರಿಯೆ ಕುರಿತು ತರಬೇತಿ ನೀಡಲಿದ್ದಾರೆ ಎಂದು ಕೆಪಿಸಿಸಿ ಅದ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಪ್ರಿಯಾಂಕಾ ಖರ್ಗೆ, ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ, ಚುನಾವಣೆ, ಯುವ ಅಧ್ಯಕ್ಷ, ಕಾಂಗ್ರೆಸ್, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ