ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ತ್ರಿಶಂಕು ಸ್ಥಿತಿ: ಶ್ರೀರಾಮುಲು ಜೆಡಿಎಸ್ ಸೇರ್ಪಡೆ? (BJP | Sri ramulu | Reddy Brothers | Bellary | Latest News in Kannada | Kannada News | Karnataka News | Latest Karnataka News | Bangalore | Latest Poli)
ಅಕ್ರಮ ಗಣಿ ಹಗರಣ ವರದಿಯಲ್ಲಿ ಬಳ್ಳಾರಿ ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ಹೆಸರು ಉಲ್ಲೇಖವಾಗಿರುವುದರಿಂದ ಸಚಿವ ಸಂಪುಟ ಸೇರ್ಪಡೆಗೆ ಬಿಜೆಪಿ ಹೈಕಮಾಂಡ್ ವಿರೋಧ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಶ್ರೀರಾಮುಲು ಜೆಡಿಎಸ್ ಪಾಳಯಕ್ಕೆ ಸೇರುತ್ತಾರೆಂಬ ಊಹಾಪೋಹ ಹಬ್ಬಿದೆ. ಆದರೆ ಇದು ಸತ್ಯಕ್ಕೆ ದೂರವಾದ ವಿಚಾರ ಎಂದು ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಶುಕ್ರವಾರ ಹುಬ್ಬಳ್ಳಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಲ್ಲಾರೀ...ಹಾಗೇನಿಲ್ಲ ನಾನು ಜೆಡಿಎಸ್ ಸೇರುತ್ತೇನೆ ಎಂಬುದು ಮಾಧ್ಯಮಗಳ ಸೃಷ್ಟಿ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.

ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಸಿಗದಿದ್ದರೂ ಕೂಡ ನಾನು ಜೆಡಿಎಸ್‌ ಪಕ್ಷಕ್ಕೆ ಸೇರಲ್ಲ. ಬೆಂಬಲಿಗರ ಸಭೆಯೂ ನಡೆಸಲ್ಲ. ಹಾಗಾಗಿ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಪುನರುಚ್ಚರಿಸಿದರು.

ಅಕ್ರಮ ಗಣಿ ವರದಿಯಲ್ಲಿ ವಿ.ಸೋಮಣ್ಣ ಅವರ ಹೆಸರಿದ್ದರೂ ಕೂಡ ಅವರಿಗೆ ಮತ್ತೆ ಸಚಿವಸ್ಥಾನ ನೀಡಲಾಗಿತ್ತು. ಹಾಗಾಗಿಯೇ ರೆಡ್ಡಿ ಸಹೋದರರು ರಾಜ್ಯ ಮತ್ತು ರಾಷ್ಟ್ರಮಟ್ಟದ ಬಿಜೆಪಿ ನಾಯಕರ ಮೇಲೆ ತಮಗೂ ಸಚಿವ ಸ್ಥಾನ ನೀಡುವಂತೆ ಒತ್ತಡ ಹೇರಿದ್ದರು. ಆದರೆ ಬಳ್ಳಾರಿ ರೆಡ್ಡಿ ಸಹೋದರರಿಂದಾಗಿ ಪಕ್ಷಕ್ಕೆ ಬಹಳಷ್ಟು ಹಾನಿಯಾಗಿದೆ. ಅವರನ್ನು ಯಾವುದೇ ಕಾರಣಕ್ಕೂ ಸಂಪುಟಕ್ಕೆ ಸೇರಿಸಿಕೊಳ್ಳಬಾರದೆಂದು ಹೈಕಮಾಂಡ್ ಸೂಚನೆ ನೀಡಿತ್ತು.

ಸಚಿವ ಸಂಪುಟ ಸೇರಲು ಬಹಳಷ್ಟು ಕಸರತ್ತು ನಡೆಸಿ ವಿಫಲರಾದ ನಂತರ ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ತಮ್ಮ ಆಪ್ತ ಶಾಸಕರನ್ನು ವಿದೇಶಕ್ಕೆ ಕಳುಹಿಸಿ ಒತ್ತಡ ತಂತ್ರ ಹೇರಿದ್ದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಶ್ರೀರಾಮುಲು, ರೆಡ್ಡಿ ಸಹೋದರರು, ಬಳ್ಳಾರಿ, ರೆಡ್ಡಿ ಬ್ರದರ್ಸ್, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀ