ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಸ್ವಾಭಿಮಾನಕ್ಕೆ ಧಕ್ಕೆ : ಶಾಸಕ ಸ್ಥಾನಕ್ಕೆ ಶ್ರೀರಾಮುಲು ರಾಜೀನಾಮೆ (Sriramulu | MLA | Resigned | BJP | Reddy brothers | Congress | Kannada News | Karnataka News)
PTI
ಲೋಕಾಯುಕ್ತ ವರದಿಯಿಂದ ಸ್ವಾಭಿಮಾನಕ್ಕೆ ಧಕ್ಕೆ ಬಂದಿರುವುದರಿಂದ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಮಡಿಕೇರಿಗೆ ತೆರಳಿ ಸ್ಪೀಕರ್ ಬೋಪಯ್ಯ ಅವರಿಗೆ ರಾಜೀನಾಮೆ ನೀಡುವುದಾಗಿ ಮಾಜಿ ಸಚಿವ ಶ್ರೀರಾಮಲು ಘೋಷಿಸಿದ್ದಾರೆ.

ಶ್ರೀರಾಮಲು ಅಂದರೆ ಪ್ರಾಮಾಣಿಕ, ಪ್ರಾಮಾಣಿಕ ಅಂದರೆ ಶ್ರೀರಾಮಲು. ಆದರೆ, ಲೋಕಾಯುಕ್ತರ ವರದಿಯಿಂದ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. 20 ವರ್ಷಗಳ ರಾಜಕೀಯದಲ್ಲಿ ಒಂದು ಕಪ್ಪು ಚುಕ್ಕೆಯಿಲ್ಲ. ಅತ್ಯಂತ ಪ್ರಾಮಾಣಿಕವಾಗಿ ದುಡಿದಿದ್ದೇನೆ ಎಂದು ನುಡಿದರು.

ರಾಜ್ಯದ ಜನತೆ ಐದು ವರ್ಷಗಳ ಅಧಿಕಾರ ನಡೆಸಲು ಆದೇಶ ನೀಡಿದ್ದಾರೆ. ಉತ್ತರ ಕರ್ನಾಟಕದ ಬೆಂಬಲಿಗ ಶಾಸಕರಿಗೆ ನನ್ನ ಜೊತೆ ಬಾರದಂತೆ ಸಲಹೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಮಂತ್ರಿ ಖುರ್ಚಿಗೆ ಅಂಟಿಕೊಂಡಿರುವ ಅಥವಾ ನಾನು ಸಮಸ್ಯೆಯನ್ನು ಕಂಡು ಓಡಿಹೋಗುವ ವ್ಯಕ್ತಿಯಲ್ಲ. ಎಲ್ಲವನ್ನು ಎದುರಿಸುತ್ತೇನೆ. ಚಕ್ರವ್ಯೂಹದಲ್ಲಿ ಸಿಲುಕಿಸುತ್ತಿದ್ದಾರೆ. ಜಿಲ್ಲೆಯ ಜನತೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.


ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದು ದೇಶವನ್ನು ಪ್ರಗತಿ ಪಥದಲ್ಲಿ ತೆಗೆದುಕೊಂಡು ಹೋಗಬೇಕು ಎನ್ನುವುದು ವಾಜಪೇಯ್ ಕನಸಾಗಿತ್ತು. ವಾಜಪೇಯ್ ಕನಸು ನನಸಾಗಿಸಲು 6 ಕೋಟಿ ಜನತೆ ಬೆಂಬಲ ನೀಡಿ ಬಿಜೆಪಿ ಅಧಿಕಾರಕ್ಕೆ ತಂದಿದ್ದಾರೆ ಎಂದು ತಿಳಿಸಿದರು.

ನಾನೊಬ್ಬ ಪ್ರಾಮಾಣಿಕ ಕಾರ್ಯಕರ್ತನಾಗಿ ಪಕ್ಷದ ಏಳಿಗೆಗಾಗಿ ದುಡಿದಿದ್ದೇನೆ. ರಾಜ್ಯದಲ್ಲೆಡೆ ಪ್ರವಾಸ ಮಾಡಿ ರಾಜ್ಯದಲ್ಲಿ ಅಧಿಕಾರ ಪಡೆಯಲು ಶ್ರಮಿಸಿದ್ದೇವೆ. ಕಳೆದ 20 ವರ್ಷಗಳಿಂದ ರಾಜಕೀಯದಲ್ಲಿ ಹೋರಾಟ ಮಾಡಿದ್ದೇನೆ.

ಕಾಂಗ್ರೆಸ್ ಭದ್ರಕೋಟೆಯಾದ ಬಳ್ಳಾರಿಯಲ್ಲಿ, ಬಿಜೆಪಿ ಪಕ್ಷದ ಕಹಳ ಮೊಳಗಿಸಿದ್ದೇನೆ. ಸೋನಿಯಾ ವಿರುದ್ಧ ಪರಾಭವಗೊಂಡ ತಾಯಿ ಸುಷ್ಮಾ ಅವಮಾನದ ಸೇಡು ತೀರಿಸಿಕೊಂಡು ಬಿಜೆಪಿ ಭದ್ರಕೋಟೆಯಾಗಿಸಿದ್ದೆವೆ ಎಂದು ಸಂತಸ ವ್ಯಕ್ತಪಡಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯ ಮಧ್ಯೆಯು ಗ್ರಾಮಪಂಚಾಯಿತಿಯಿಂದ ಲೋಕಸಭೆವರೆಗೆ ಬಿಜೆಪಿ ಸದಸ್ಯರು ಆಯ್ಕೆಯಾಗಿದ್ದಾರೆ. ರೆಡ್ಡಿ ಸಹೋದರರ ಅವಿರತ ಶ್ರಮ ಸರಕಾರ ಅಧಿಕಾರ ಹಿಡಿಯಲು ಕಾರಣವಾಗಿದೆ ಎಂದು ಹೇಳಿದ್ದಾರೆ.

ಪ್ರವಾಸೋದ್ಯಮ, ಜವಳಿ ,ಮೂಲಭೂತ, ಆರೋಗ್ಯ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ನೇಕಾರರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ. ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಲ್ಲಿ ಬಡರೋಗಿಗಳಿಗೆ ಹಲವು ಯೋಜನೆಗಳನ್ನು ರೂಪಿಸಿದ್ದೇನೆ.

ರಾಜ್ಯದಲ್ಲಿ ಸಂಪೂರ್ಣ ಬಹುಮತದಿಂದ ಬರಬೇಕು ಎನ್ನುವ ಗುರಿಯಿಂದ, ಪ್ರಾಮಾಣಿಕ ಕಾರ್ಯಕರ್ತನಾಗಿ ದುಡಿದಿದ್ದರಿಂದ 110 ಸ್ಥಾನಗಳಲ್ಲಿ ಗೆಲುವು ಪಡೆದಿದ್ದೇವೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕು ಎನ್ನುವ ಹಿನ್ನೆಲೆಯಲ್ಲಿ ಪಕ್ಷೇತರ ಶಾಸಕರು ಬೆಂಬಲ ಪಡೆದು ಸರಕಾರ ರಚಿಸಿದೆವು.

ಶ್ರೀರಾಮಲುಗೆ ಸಚಿವ ಸ್ಥಾನ ನೀಡಿದಲ್ಲಿ, ಯಡಿಯೂರಪ್ಪ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಕೆಲ ಹಿರಿಯ ಸಚಿವರು ಬೆನ್ನಿಗೆ ಚೂರಿ ಹಾಕಿದ್ದರು ಎಂದು ಆರೋಪಿಸಿದ್ದಾರೆ.

ಸಂತೋಷ್ ಹೆಗ್ಡೆಯವರನ್ನು ಅಣ್ಣಾ ಹಜಾರೆಯವರಂತೆ ಗೌರವಿಸುತ್ತೇನೆ. ಲೋಕಾಯುಕ್ತ ವರದಿಯಲ್ಲಿ ನನ್ನ ಹೆಸರಿರುವುದರಿಂದ ನೋವಾಗಿದೆ. ಆಘಾತವಾಗಿದೆ. ಮುಖ್ಯಮಂತ್ರಿ ಸದಾನಂದಗೌಡ ಲೋಕಾಯುಕ್ತ ವರದಿ ಪರಿಶೀಲನೆಗೆ ಮುಖ್ಯಕಾರ್ಯದರ್ಶಿಯವರ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ. ವರದಿ ನೀಡಿದ ನಂತರ ಉತ್ತರ ನೀಡುತ್ತೇನೆ ಎಂದರು.

ಲೋಕಾಯುಕ್ತ ವರದಿಯಿಂದ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದಿದ್ದಾರೆ. ವೀರಶೈವರಿಗೆ ಬೆಂಬಲ ನೀಡಲು ಉತ್ತರ ಕರ್ನಾಟಕದಿಂದ ಜಗದೀಶ್ ಶೆಟ್ಟರ್ ಅವರಿಗೆ ಬೆಂಬಲ ನೀಡಿದ್ದೇವೆ. ಆ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಹಾಗೂ ಉತ್ತರ ಕರ್ನಾಟಕ ಭಾಗದ ಅನೇಕ ಶಾಸಕರು ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.

ಲಿಂಗಾಯುತ ಮಠಾಧೀಶರು ಪಂಚಾಕ್ಷರಿ ಗವಾಯಿಗಳು,ಸಿದ್ದಲಿಂಗೇಶ್ವರ ಮಹಾ ಶ್ರೀಗಳು ಸೇರಿದಂತೆ ಅನೇಕ ಮಠಾಧೀಶರು ನನಗೆ ಆಶೀರ್ವದಿಸಿದ್ದಾರೆ.ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕು ಎನ್ನುವ ದೃಷ್ಟಿಯಿಂದ ಶೆಟ್ಟರ್ ಅವರಿಗೆ ಬೆಂಬಲ ನೀಡಿದ್ದೇವೆ ಎಂದು ಮಾಜಿ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಶ್ರೀರಾಮುಲು, ಶಾಸಕ, ರಾಜೀನಾಮೆ, ಬಿಜೆಪಿ, ರೆಡ್ಡಿ ಸಹೋದರರು, ಕಾಂಗ್ರೆಸ್, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ