ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ರಾಜ್ಯದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಸದಾನಂದ ಗೌಡ (Sadanand gowda | Chief minister | Development | Kannada News | Karnataka News | Latest Karnataka News | Bangalore)
ರಾಜ್ಯದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಸದಾನಂದ ಗೌಡ
ಬೆಂಗಳೂರು, ಭಾನುವಾರ, 4 ಸೆಪ್ಟೆಂಬರ್ 2011( 13:22 IST )
PR
ಅಧಿಕಾರದಲ್ಲಿರುವಷ್ಟು ದಿನವೂ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದಿಂದ ದೂರ ಉಳಿದು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಮುಖ್ಯಮಂತ್ರಿ ಸದಾನಂದಗೌಡ ಹೇಳಿದ್ದಾರೆ.
ರಾಜಕೀಯದಲ್ಲಿ ಸ್ವಾರ್ಥಪರ ಧೋರಣೆಗಳು ಸಾಮಾಜಿಕ ಅಧಃಪತನಕ್ಕೆ ಕಾರಣವಾಗಿವೆ. ಇಂತಹ ವಿದ್ಯಾಮಾನಗಳಿಂದಾಗಿ ಸಾಮಾಜಿಕ ಅಭಿವೃದ್ಧಿಗೆ ತೊಡಕಾಗಿವೆ. ಆದ್ದರಿಂದ, ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದಿಂದ ದೂರ ಉಳಿದು ದೀನದಲಿತರ ಸಂಕಷ್ಟಕ್ಕೆ ಸ್ಪಂದಿಸಲಿದ್ದೇನೆ ಎಂದು ತಿಳಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯಾಗಿ ಒಂದು ತಿಂಗಳು ಕಳೆದಿದ್ದೇನೆ. ಈ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿಪರ ಯೋಜನೆಗಳು ಮತ್ತು ಅನುಭವಗಳ ಬಗ್ಗೆ ಸೆ.6 ರಂದು ತಮ್ಮ ಭಾವನೆಗಳನ್ನು ಹಂಚಿಕೊಳ್ಳುವುದಾಗಿ ಹೇಳಿದ ಅವರು, ಸರಕಾರ ಬಜೆಟ್‌ನಲ್ಲಿ ಶಿಕ್ಷಣಕ್ಕೆ 12 ಸಾವಿರ ಕೋಟಿ ರೂಪಾಯಿ ಮೀಸಲಾಗಿರಿಸಿದ್ದೆನೆ.ಅದರಲ್ಲಿ, 10 ಸಾವಿರ ಕೋಟಿ ರೂಪಾಯಿಗಳನ್ನು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣಕ್ಕೆ ನೀಡಲಾಗಿದೆ ಎಂದರು.
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಆದಿಚುಂಚನಗಿರಿ ಮಠದ ಕೊಡುಗೆ ಆಪಾರ. ಸರಕಾರ ನಿರ್ವಹಿಸಬೇಕಾದ ಕಾರ್ಯವನ್ನು ಆದಿಚುಂಚನಗಿರಿ ಮಠ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಮುಖ್ಯಮಂತ್ರಿ ಸದಾನಂದ ಗೌಡ ಶ್ಲಾಘಿಸಿದರು.