ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ರೆಡ್ಡಿ ಬಂಧನ ತಪ್ಪು, ಯುಪಿಎ ಕಳ್ಳ ಸರ್ಕಾರ; ಶ್ರೀರಾಮಲು ವಾಗ್ದಾಳಿ (Sri ramulu | UPA | Janardana Reddy | CBI | Bellary | Latest News in Kannada | Kannada News | Karnataka News | Latest Karnataka News | Bangalore | Bang)
ಬಳ್ಳಾರಿ ಗಣಿಧಣಿ, ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ಸಿಬಿಐ ದಿಢೀರ್ ದಾಳಿ ನಡೆಸಿ ಬಂಧಿಸಿರುವ ಹಿನ್ನೆಲೆಯಲ್ಲಿ ಆಪ್ತಮಿತ್ರ ಶ್ರೀರಾಮುಲು ಆಡಳಿತಾರೂಢ ಯುಪಿಎ ಮತ್ತು ಸಿಬಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ದೇಶದಲ್ಲಿ ಕಳ್ಳ ಸರ್ಕಾರ ಅಧಿಕಾರ ನಡೆಸುತ್ತಿದೆ. ತಮ್ಮ ವಿರುದ್ಧ ತಿರುಗಿ ಬಿದ್ದವರನ್ನು ಸಿಬಿಐಯನ್ನು ಬಳಸಿಕೊಂಡು ವ್ಯವಸ್ಥಿತವಾಗಿ ತುಳಿಯುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಯಾವುದೇ ನೋಟಿಸ್ ನೀಡದೇ ಬಂಧಿಸಿದ ಕ್ರಮ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜನಾರ್ದನ ರೆಡ್ಡಿಯವರ ನಿವಾಸದ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಸಿಬಿಐ ಡಿಐಜಿ ಲಕ್ಷ್ಮಣ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಬಂಧಿಸಿತ್ತು. ಈ ನಿಟ್ಟಿನಲ್ಲಿ ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ನಮ್ಮ ಮೇಲೆ ಸುಮಾರು 16 ಬಾರಿ ದಾಳಿ ನಡೆಸಲಾಗಿದೆ. ಬಳ್ಳಾರಿ ಈ ಹಿಂದೆ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಅಲ್ಲದೇ ಬಳ್ಳಾರಿಯಲ್ಲಿ ಕಾಂಗ್ರೆಸ್ ಕೋಟೆ ಪುಡಿಗಟ್ಟಿ, ಬಿಜೆಪಿ ಅಧಿಕಾರಕ್ಕೆ ಬರಲು ಜನಾರ್ದನ ರೆಡ್ಡಿಯೇ ಪ್ರಮುಖ ಕಾರಣ. ಹಾಗಾಗಿ ರೆಡ್ಡಿಯನ್ನು ಬೇರೆ ಯಾವುದೇ ರೀತಿಯಿಂದಲೂ ಮಣಿಸಲು ಸಾಧ್ಯವಿಲ್ಲ ಎಂದು ಮನಗಂಡ ಕೇಂದ್ರ ಸಿಬಿಐ ದಾಳಿ ನಡೆಸಿ ಸೇಡು ತೀರಿಸಿಕೊಂಡಿದೆ ಎಂದು ಹರಿಹಾಯ್ದರು.

ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಷ್ಟಿಗೇಷನ್ ರೀತಿಯಲ್ಲಿ ಸಿಬಿಐ ಕಾರ್ಯನಿರ್ವಹಿಸುತ್ತಿದೆ. ಈ ರೀತಿಯಲ್ಲಿ ದಾಳಿಯಿಂದಾಗಿ ಮಕ್ಕಳು, ಮಹಿಳೆಯರು ಕಣ್ಣೀರು ಹಾಕುವಂತಾಗಿದೆ. ಮಕ್ಕಳು ಸ್ನಾನ ಮಾಡುತ್ತಿದ್ದರೂ ಕೂಡ ಅಧಿಕಾರಿಗಳು ಕದ ಬಡಿಯುತ್ತಾರೆ. ಏನ್ ಮಾಡ್ಲಿ....ಹೇಳಿ. ನಾವೇನು ಕಳ್ಳರಾ? ಈ ರೀತಿ ಯಾಕೆ ನಮ್ಮ ಮೇಲೆ ದಾಳಿ ನಡೆಸಿ ಕಿರುಕುಳ ನೀಡುತ್ತೀರಿ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಆದರೆ ನಾನು ಈ ಸಂದರ್ಭದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ನೇರ ಸವಾಲು ಹಾಕುತ್ತೇನೆ, ಭ್ರಷ್ಟಾಚಾರದಲ್ಲಿಯೇ ಮುಳುಗಿರುವ ಕಾಂಗ್ರೆಸ್ ಪಕ್ಷ ಸದ್ಯದಲ್ಲಿಯೇ ಅಧಿಕಾರ ಕಳೆದುಕೊಳ್ಳಲಿದೆ. ಇನ್ಮುಂದೆ ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ ಎಂದರು.

ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನಾವೇನೂ ತನಿಖೆಗೆ ಸಹಕರಿಸುವುದಿಲ್ಲ ಎಂದು ಹೇಳಿಲ್ಲ. ಆದರೆ ದಿಢೀರ್ ದಾಳಿ ನಡೆಸಿ ಬಂಧಿಸುವುದು, ಕಿರುಕುಳ ನೀಡುವುದು ಯಾವ ನ್ಯಾಯ ಹೇಳಿ ಎಂದು ಶ್ರೀರಾಮುಲು ಈ ಸಂದರ್ಭದಲ್ಲಿ ಪ್ರಶ್ನಿಸಿದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಯುಪಿಎ, ಶ್ರೀರಾಮುಲು, ಜನಾರ್ದನ ರೆಡ್ಡಿ, ಸಿಬಿಐ ದಾಳಿ, ಬಳ್ಳಾರಿ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ, ಕನ್ನ