ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ರೆಡ್ಡಿ ನಂತ್ರ ಶ್ರೀರಾಮುಲು, ಕರುಣಾಕರ ರೆಡ್ಡಿ ಮನೆ ಮೇಲೂ ದಾಳಿ (Janardana Reddy | Sri ramulu | Karunakar Reddy | CBI | Bellary | Latest News in Kannada | Kannada News | Karnataka News | Bangalore News,)
ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ನಿವಾಸ, ಕಂಪನಿಗಳ ಮೇಲೆ ಸಿಬಿಐ ದಿಢೀರ್ ದಾಳಿ ನಡೆಸಿ ಬಂಧಿಸಿದ ಬೆನ್ನಲ್ಲೇ ಮಾಜಿ ಸಚಿವರಾದ ಬಿ.ಶ್ರೀರಾಮುಲು, ಕರುಣಾಕರ ರೆಡ್ಡಿ ನಿವಾಸಗಳ ಮೇಲೂ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ನಗರದ ವಿಂಡ್ಸರ್ ಮ್ಯಾನರ್ ಸಮೀಪವಿರುವ ಸೆವೆನ್ ಮಿನಿಸ್ಟರ್ ಕ್ವಾಟರ್ಸ್‌ನಲ್ಲಿರುವ ಶ್ರೀರಾಮುಲು ಹಾಗೂ ಕರುಣಾಕರ ರೆಡ್ಡಿ ನಿವಾಸಗಳ ಮೇಲೆ ಸಿಬಿಐ ಅಡಿಷನಲ್ ಎಸ್ಪಿ ಎಸ್.ಎಸ್.ಗಿರಿ ನೇತೃತ್ವದ ತಂಡ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಹಲವಾರು ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿರುವ ಸಿಬಿಐ ಪರಿಶೀಲನೆ ನಡೆಸುತ್ತಿದೆ.

ರೆಡ್ಡಿ ಸಹೋದರರ ಆಪ್ತ ಮಿತ್ರನಾಗಿರುವ ಶ್ರೀರಾಮುಲು ಕೂಡ ಅಕ್ರಮ ಗಣಿಗಾರಿಕೆ ವ್ಯವಹಾರದಲ್ಲಿ ಭಾಗಿಯಾಗಿರುವ ಶಂಕೆಯಲ್ಲಿ ಸಿಬಿಐ ದಾಳಿ ನಡೆಸಿದೆ. ಅಲ್ಲದೇ ಶ್ರೀರಾಮುಲು ಅವರನ್ನೂ ಕೂಡ ಸಿಬಿಐ ಬಂಧಿಸುವ ಸಾಧ್ಯತೆ ಇದೆಯೇ ಎಂಬ ಕುತೂಹಲ ದಟ್ಟವಾಗತೊಡಗಿದೆ.

ಏತನ್ಮಧ್ಯೆ ಮೈಸೂರಿನಲ್ಲಿ ಬಿಗಿ ಭದ್ರತೆ ನಡುವೆ ಚಾಮುಂಡಿ ಬೆಟ್ಟವನ್ನು ಪಾದಯಾತ್ರೆ ಮೂಲಕ ಹತ್ತಿ, ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಮನೇಲಿ ಏನೂ ಸಿಗಲ್ಲ. ಅನಾವಶ್ಯಕವಾಗಿ ಆರೋಪ ಹೊರಿಸಿ ದಾಳಿ ನಡೆಸಿದ್ದಾರೆ. ನಮಗೆ ಅಪಾರ ಜನ ಬೆಂಬಲವಿದೆ ಎಂದರು.

ನಮಗೆ ಒದಗಿ ಬಂದಿರುವ ಎಲ್ಲಾ ವಿಘ್ನಗಳೂ ಪರಿಹಾರವಾಗಲಿ ಎಂದು ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿಕೊಂಡಿರುವುದಾಗಿ ಹೇಳಿದರು. ಚಾಮುಂಡಿ ದರ್ಶನ ಪಡೆದ ನಂತರ ಶ್ರೀರಾಮುಲು ಬಳ್ಳಾರಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಜನಾರ್ದನ ರೆಡ್ಡಿ, ಶ್ರೀರಾಮುಲು, ಕರುಣಾಕರ ರೆಡ್ಡಿ, ಸಿಬಿಐ ದಾಳಿ, ಬಳ್ಳಾರಿ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾ