ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಜನಾರ್ದನ ರೆಡ್ಡಿ ಐಶಾರಾಮಿ ಕಾರು, ಹೆಲಿಕಾಪ್ಟರ್, ಬಸ್ ಜಪ್ತಿ (CBI | Janardana Reddy | CBI | Bellary | Latest News in Kannada | Kannada News | Karnataka News | Latest Karnataka News | Bangalore News)
ಅಕ್ರಮ ಗಣಿಗಾರಿಕೆ, ಗಡಿನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರನ್ನು ಹೈದರಾಬಾದ್ ಸಿಬಿಐ ವಿಶೇಷ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ರೆಡ್ಡಿ ಪರ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿದೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಸೋಮವಾರ ಬೆಳ್ಳಂಬೆಳಗ್ಗೆ ಸಿಬಿಐ ತಂಡ ಜನಾರ್ದನ ರೆಡ್ಡಿ ಹಾಗೂ ಒಎಂಸಿ ಆಡಳಿತ ನಿರ್ದೇಶಕ ಶ್ರೀನಿವಾಸ ರೆಡ್ಡಿ ನಿವಾಸಗಳ ಮೇಲೆ ದಿಢೀರ್ ದಾಳಿ ನಡೆಸಿ ವಶಕ್ಕೆ ತೆಗೆದುಕೊಂಡಿತ್ತು. ಸಂಜೆ ಇಬ್ಬರನ್ನೂ ಹೈದರಾಬಾದ್ ನಾಂಪಲ್ಲಿ ಸಮೀಪವಿರುವ ಸಿಬಿಐ ವಿಶೇಷ ಕೋರ್ಟ್‌ಗೆ ಹಾಜರುಪಡಿಸಿದ್ದರು.

ಈ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಬಂಧನವನ್ನು ಪ್ರಶ್ನಿಸಿ ವಕೀಲರು ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಜನಾರ್ದನ ರೆಡ್ಡಿ ಹಾಗೂ ಶ್ರೀನಿವಾಸ ರೆಡ್ಡಿಯವರನ್ನು ಸೆ.19ರವರೆಗೆ ನ್ಯಾಯಾಂಗ ವಶಕ್ಕೆ ನೀಡಿದೆ. ಅಲ್ಲದೇ ರೆಡ್ಡಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿದೆ. ಈಗಾಗಲೇ ರೆಡ್ಡಿಯನ್ನು ಸಿಬಿಐ ವಶಕ್ಕೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಈ ಸಂದರ್ಭದಲ್ಲಿ ತಿಳಿಸಿದೆ.

ಏತನ್ಮಧ್ಯೆ ಜನಾರ್ದನ ರೆಡ್ಡಿಯವರಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ಸಿಬಿಐ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಜತೆಗೆ ಹೆಲಿಕಾಪ್ಟರ್, ಐಶಾರಾಮಿ ಬಸ್, ರೇಂಜ್ ರೋವರ್, ಲ್ಯಾಂಡ್ ರೋವರ್ ಸೇರಿದಂತೆ 11 ಐಶಾರಾಮಿ ಕಾರುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇದೀಗ ಜನಾರ್ದನ ರೆಡ್ಡಿ ಹಾಗೂ ಶ್ರೀನಿವಾಸ ರೆಡ್ಡಿಯವರನ್ನು ವಿಶೇಷ ಭದ್ರತೆಯಲ್ಲಿ ಚಂಚಲಗುಡ ಸೆಂಟ್ರಲ್ ಜೈಲಿಗೆ ರವಾನಿಸಲಾಗಿದೆ.

ಸಿಬಿಐ ಬಂಧನದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಜನಾರ್ದನ ರೆಡ್ಡಿಗೆ ಸ್ವಲ್ಪ ರಿಲೀಫ್ ಸಿಕ್ಕಿದ್ದು, ಸೆ.7ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಈ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ವಶಕ್ಕೆ ಒಪ್ಪಿಸಲಿದೆಯೇ ಅಥವಾ ಜಾಮೀನು ನೀಡುತ್ತದೋ ಎಂಬುದನ್ನು ಕಾದು ನೋಡಬೇಕಾಗಿದೆ.

ಸೋಮವಾರ ಬೆಳಿಗ್ಗೆ ಬಳ್ಳಾರಿಯಲ್ಲಿನ ಜನಾರ್ದನ ರೆಡ್ಡಿಯವರ ಕುಟೀರ ನಿವಾಸ ಸೇರಿದಂತೆ ಏಕಕಾಲದಲ್ಲಿ ದಿಢೀರ್ ದಾಳಿ ನಡೆಸಿತ್ತು. ಕುಟೀರ ನಿವಾಸದಲ್ಲಿ 30 ಕೆಜಿ ಚಿನ್ನ, 3ಕೋಟಿ ರೂಪಾಯಿ ನಗದು ದೊರಕಿತ್ತು. ಒಎಂಸಿ ಆಡಳಿತ ನಿರ್ದೇಶಕ ಶ್ರೀನಿವಾಸ ರೆಡ್ಡಿ ನಿವಾಸದಲ್ಲಿಯೂ 1.5ಕೋಟಿ ನಗದು ಸಿಕ್ಕಿತ್ತು. ಅದೇ ರೀತಿ ಸಿರಗುಪ್ಪದಲ್ಲಿರುವ ಮನೆ, ಬೆಂಗಳೂರಿನಲ್ಲಿರುವ ಪಾರಿಜಾತ ನಿವಾಸದಲ್ಲಿಯೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಸಿಬಿಐ, ಜನಾರ್ದನ ರೆಡ್ಡಿ, ಸಿಬಿಐ ದಾಳಿ, ಬಳ್ಳಾರಿ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ, ಕನ್ನಡ ಆನ್ಲೈನ್