ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಬಂಧನ ಭೀತಿ; ಕುಮಾರಸ್ವಾಮಿ ದಂಪತಿಗೆ 1 ದಿನದ ರಿಲೀಫ್ (Kumaraswamy | Anitha kumaraswamy | Lokayukta Court | High court | Illegal Mining | Latest News in Kannada | Kannada News | Karnataka News | Bangalore)
kumaraswamy
PTI
ಜಂತಕಲ್ ಮೈನಿಂಗ್ ಗುತ್ತಿಗೆ ನವೀಕರಣ ಮತ್ತು ವಿಶ್ವಭಾರತಿ ಸೊಸೈಟಿ ಅವ್ಯವಹಾರ ಪ್ರಕರಣದ ವಿಚಾರಣೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಪತ್ನಿ ಅನಿತಾಕುಮಾರಸ್ವಾಮಿ ಪದೇ, ಪದೇ ಗೈರುಹಾಜರಾಗುತ್ತಿರುವುದಕ್ಕೆ ಬುಧವಾರ ಲೋಕಾಯುಕ್ತ ವಿಶೇಷ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಏತನ್ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌ಡಿಕೆ ದಂಪತಿಗೆ ಹೈಕೋರ್ಟ್ ಏಕಸದಸ್ಯಪೀಠ ಒಂದು ದಿನದ ನಿರೀಕ್ಷಣಾ ಜಾಮೀನು ನೀಡುವ ಮೂಲಕ ತಾತ್ಕಾಲಿಕ ರಿಲೀಫ್ ಪಡೆದಂತಾಗಿದೆ.

ಜಂತಕಲ್ ಮೈನಿಂಗ್ ಗುತ್ತಿಗೆ ನವೀಕರಣ ಹಾಗೂ ವಿಶ್ವಭಾರತಿ ಸೊಸೈಟಿಗೆ ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಬಾರಿ ಗೈರುಹಾಜರಾಗಿದ್ದಕ್ಕೆ ಕಿಡಿಕಾರಿದ್ದ ಲೋಕಾಯುಕ್ತ ವಿಶೇಷ ಕೋರ್ಟ್ ಸೆ.7ರಂದು ಎಚ್.ಡಿ.ಕೆ ಮತ್ತು ಅನಿತಾಕುಮಾರಸ್ವಾಮಿ ಖುದ್ದು ಹಾಜರಾಗುವಂತೆ ಸೂಚಿಸಿತ್ತು.

ಆ ನಿಟ್ಟಿನಲ್ಲಿ ಬುಧವಾರ ಬೆಳಿಗ್ಗೆ ವಿಚಾರಣೆ ಆರಂಭವಾದಾಗಲೂ ಎಚ್.ಡಿ.ಕೆ ದಂಪತಿ ಗೈರು ಹಾಜರಾಗಿದ್ದರು. ಆ ಸಂದರ್ಭದಲ್ಲಿ ತಮ್ಮ ಕಕ್ಷಿದಾರರಿಗೆ ಅನಾರೋಗ್ಯ ಇರುವ ಹಿನ್ನೆಲೆಯಲ್ಲಿ ಖುದ್ದು ಹಾಜರಾತಿಗೆ ವಿನಾಯ್ತಿ ಕೊಡುವಂತೆ ವಕೀಲರು ಅರ್ಜಿ ಸಲ್ಲಿಸಿದ್ದರು.

ಆದರೆ ಗೈರುಹಾಜರಿಯನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಧೀಂದ್ರ ರಾವ್, ಅವರು ಕುಮಾರಸ್ವಾಮಿ ದಂಪತಿಗೆ ನಿಜಕ್ಕೂ ಅನಾರೋಗ್ಯ ಇದ್ದರೆ ಆ ಬಗ್ಗೆ ದಾಖಲೆ ಕೊಡುವಂತೆ ಸೂಚಿಸಿ ವಿಚಾರಣೆಯನ್ನು 11-45ಕ್ಕೆ ಮುಂದೂಡಿದ್ದರು. ತದನಂತರದ ವಿಚಾರಣೆಗೆ ಕುಮಾರಸ್ವಾಮಿ ದಂಪತಿ ಗೈರುಹಾಜರಾದಾಗ ವಿಚಾರಣೆಯನ್ನು ಮಧ್ಯಾಹ್ನ 1 ಗಂಟೆಗೆ ಮುಂದೂಡಲಾಗಿತ್ತು.

ಹೈಕೋರ್ಟ್‌ನಿಂದ ಕೊನೆಗೂ 1 ದಿನದ ರಿಲೀಫ್:
ಲೋಕಾಯುಕ್ತ ವಿಶೇಷ ಕೋರ್ಟ್ ಕಟಕಟೆ ಏರುವುದನ್ನು ತಪ್ಪಿಸಿಕೊಳ್ಳಲು ಸಾಕಷ್ಟು ಕಸರತ್ತು ನಡೆಸಿದ್ದ ಎಚ್.ಡಿ.ಕುಮಾರಸ್ವಾಮಿ ಕೊನೆ ಪ್ರಯತ್ನ ಎಂಬಂತೆ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.

ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕುಮಾರಸ್ವಾಮಿ ಹಾಗೂ ಅನಿತಾಕುಮಾರಸ್ವಾಮಿಯವರಿಗೆ ಒಂದು ದಿನದ ನಿರೀಕ್ಷಣಾ ಜಾಮೀನು ನೀಡಿದ್ದು, ಈ ಬಗ್ಗೆ ಅಂತಿಮ ಆದೇಶವನ್ನು ಗುರುವಾರ ನೀಡುವುದಾಗಿ ತಿಳಿಸಿದೆ. ಆದರೆ ಗುರುವಾರ ಕುಮಾರಸ್ವಾಮಿ ದಂಪತಿಗಳು ಲೋಕಾಯುಕ್ತ ನ್ಯಾಯಾಲಯಕ್ಕೆ ಹಾಜರಾಗಲೇಬೇಕಾಗಿದೆ.

ಆ ನಿಟ್ಟಿನಲ್ಲಿ ಮಧ್ಯಾಹ್ನ 1ಗಂಟೆಗೆ ಲೋಕಾಯುಕ್ತ ವಿಶೇಷ ಕೋರ್ಟ್‌ನಲ್ಲಿ ವಿಚಾರಣೆ ಆರಂಭವಾದಾಗ, ಕುಮಾರಸ್ವಾಮಿ ಪರ ವಕೀಲರು, ಹೈಕೋರ್ಟ್‌ನಿಂದ ಒಂದು ದಿನದ ನಿರೀಕ್ಷಣಾ ಜಾಮೀನು ಮಂಜೂರಾಗಿರುವ ವಿಷಯವನ್ನು ನ್ಯಾಯಾಧೀಶರ ಗಮನಕ್ಕೆ ತಂದರು.

ಹಾಗಾಗಿ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರಾಗಿರುವ ಆದೇಶದ ಪ್ರತಿಯನ್ನು ಲೋಕಾಯುಕ್ತ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕುಮಾರಸ್ವಾಮಿ ವಕೀಲರಿಗೆ ಸೂಚನೆ ನೀಡಿ ವಿಚಾರಣೆಯನ್ನು ಮಧ್ಯಾಹ್ನ 3ಗಂಟೆಗೆ ಮುಂದೂಡಿದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಕುಮಾರಸ್ವಾಮಿ, ಅನಿತಾಕುಮಾರಸ್ವಾಮಿ, ಲೋಕಾಯುಕ್ತ ಕೋರ್ಟ್, ಹೈಕೋರ್ಟ್, ಅಕ್ರಮ ಗಣಿ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾ