ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಶ್ರೀರಾಮುಲು ರಾಜೀನಾಮೆ ಸ್ವೀಕರಿಸುತ್ತಿಲ್ಲವೇಕೆ?: ಸ್ಪೀಕರ್‌ಗೆ ಎಚ್‌ಡಿಕೆ (Sri ramulu | kumaraswamy | JDS | BJP | Bopayya | Resign | Karnataka News | Bangalore News)
ಬಳ್ಳಾರಿ ಗಣಿಧಣಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಆಪ್ತಮಿತ್ರ ಶ್ರೀರಾಮುಲು ಅವರು ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಸ್ವೀಕರಿಸುವ ಕುರಿತು ಸ್ಪೀಕರ್ ಕೆ.ಜಿ.ಬೋಪಯ್ಯ ದ್ವಿಮುಖ ನೀತಿ ಅನುಸರಿಸಿ ಸಣ್ಣತನ ಪ್ರದರ್ಶಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್, ಜೆಡಿಎಸ್ ಶಾಸಕರು ರಾಜೀನಾಮೆ ಕೊಟ್ಟಾಗ ಅದನ್ನು ತರಾತುರಿಯಲ್ಲಿ ಸ್ವೀಕರಿಸುತ್ತಿದ್ದ ಸ್ಪೀಕರ್ ಬೋಪಯ್ಯ, ಶ್ರೀರಾಮುಲು ರಾಜೀನಾಮೆ ಸ್ವೀಕರಿಸಿದೇ ಇನ್ನೂ ಯಾಕೆ ಮೀನ ಮೇಷ ಎಣಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಶ್ರೀರಾಮುಲು ರಾಜೀನಾಮೆ ಸ್ವೀಕರಿಸುವುದನ್ನು ಉದ್ದೇಶಪೂರ್ವಕವಾಗಿಯೇ ವಿಳಂಬ ಮಾಡುವ ಮೂಲಕ ಬೇರೆ, ಬೇರೆ ರೀತಿ ಒತ್ತಡ ಹೇರುವ ತಂತ್ರ ಅನುಸರಿಸುತ್ತಿದ್ದಾರೆ. ಅಷ್ಟೇ ಅಲ್ಲ ಸ್ಪೀಕರ್ ಕೆ.ಜಿ.ಬೋಪಯ್ಯ ತಮ್ಮ ಅಧಿಕಾರದ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ದೂರಿದರು.

ಇತ್ತೀಚೆಗಷ್ಟೇ ಅಪಾರ ಬೆಂಬಲಿಗರೊಂದಿಗೆ ಪಾದಯಾತ್ರೆ ನಡೆಸಿ ಮೈಸೂರಿನ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ತಮ್ಮ ಶಾಸಕ ಸ್ಥಾನಕ್ಕೆ ಶ್ರೀರಾಮುಲು ರಾಜೀನಾಮೆ ಕೊಟ್ಟಿದ್ದರು. ಆದರೆ ಶ್ರೀರಾಮುಲು ರಾಜೀನಾಮೆ ಪತ್ರವನ್ನು ಸ್ಪೀಕರ್ ಅಧಿಕೃತವಾಗಿ ಇನ್ನೂ ಸ್ವೀಕರಿಸಿಲ್ಲ.

ಅಕ್ರಮ ಗಣಿಗಾರಿಕೆ ಕುರಿತಂತೆ ಲೋಕಾಯುಕ್ತರು ಸಲ್ಲಿಸಿರುವ ವರದಿಯಲ್ಲಿ ತಮ್ಮ ಹೆಸರು ಉಲ್ಲೇಖವಾಗಿರುವುದರಿಂದ, ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ನಂತರ ಮತ್ತೆ ಸ್ಪರ್ಧಿಸಿ ಜನಾದೇಶ ಪಡೆಯುವುದಾಗಿ ಶ್ರೀರಾಮುಲು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸ್ಪೀಕರ್, ರಾಜೀನಾಮೆ ಕುರಿತಂತೆ ಶ್ರೀರಾಮುಲು ಅವರಿಗೆ ಮೂರು ಅಂಶಗಳ ಬಗ್ಗೆ ಸ್ಪಷ್ಟನೆ ಕೇಳಿದ್ದೇನೆ. ಸ್ವಯಂ ಇಚ್ಛೆಯಿಂದ ರಾಜೀನಾಮೆ ಕೊಟ್ಟಿದ್ದೀರಾ?, ರಾಜೀನಾಮೆ ನೀಡಲು ಒತ್ತಡ ಇದೆಯಾ? ಬೇರೆ ಯಾವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದೀರಿ ಎಂಬ ಕುರಿತು ಸ್ಪಷ್ಟನೆ ಕೇಳಿರುವುದಾಗಿ ಕೆಜಿ ಬೋಪಯ್ಯ ವಿವರಿಸಿದ್ದರು.

ಹಾಗಾಗಿ ನಾನು ಕೇಳಿರುವ ಸ್ಪಷ್ಟನೆಗೆ ಶ್ರೀರಾಮುಲು ಅವರಿಂದ ಉತ್ತರ ಬಂದಿಲ್ಲ. ಅವರ ಉತ್ತರ ಬಂದ ನಂತರ ಆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಸ್ಪೀಕರ್ ಕೆ.ಜಿ.ಬೋಪಯ್ಯ ಸ್ಪಷ್ಟಪಡಿಸಿದ್ದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಶ್ರೀರಾಮುಲು, ಕುಮಾರಸ್ವಾಮಿ, ಜೆಡಿಎಸ್, ಬಿಜೆಪಿ, ಕೆಜಿ ಬೋಪಯ್ಯ, ರಾಜೀನಾಮೆ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜ