ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಜನಾರ್ದನ ರೆಡ್ಡಿ ಆಪ್ತರ ಮನೆಗಳ ಮೇಲೆ ಸಿಬಿಐ ದಾಳಿ (Janardana Reddy | CBI | Illegal Mining | Karnataka News)
ಅಕ್ರಣ ಗಣಿಗಾರಿಕೆ ಸಂಬಂಧ ಜೈಲು ಸೇರಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಆಪ್ತರ ಮನೆಗಳ ಮೇಲೂ ಭಾನುವಾರ ಸಿಬಿಐ ದಾಳಿ ನಡೆಸಿದೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಪಾರ್ವತಿ ನಗರದಲ್ಲಿರುವ ಬುಡಾ ಅಧ್ಯಕ್ಷ ಗುರುಲಿಂಗನಗೌಡ ಹಾಗೂ ನೆಹರೂ ಕಾಲೋನಿಯ ನಿವಾಸಿ ಹಾಗೂ ಜಿಲ್ಲಾ ಪಂಚಾಯತ್ ಬಿಜೆಪಿ ಸದ್ಯಸ ರಾಜಶೇಖರ ಗೌಡರ ಮನಗೆ ದಾಳಿ ನಡೆಸಿರುವ ಸಿಬಿಐ ತಂಡ ದಾಖಲೆಯ ಶೋಧ ನಡೆಸಿದೆ.

ಆರು ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ ಬಳ್ಳಾರಿ ಜನಾರ್ದನ ರೆಡ್ಡಿ ಮನೆಗೆ ದಾಳಿ ನಡೆಸಿದ ಸಂದರ್ಭದಲ್ಲಿ ಕೋಟ್ಯಂತರ ಬೆಳೆಬಾಳುವ 30 ಕೆ.ಜಿ. ಚಿನ್ನಭರಣಗಳನ್ನು ಸಿಬಿಐ ವಶಪಡಿಸಿಕೊಂಡಿತ್ತು. ಇದೀಗ ತನಿಖೆ ಚುರುಕುಗೊಳಿಸಿರುವ ಸಿಬಿಐ ತಂಡ ರೆಡ್ಡಿ ಆಪ್ತರ ಮನೆಗಳ ಮೇಲೂ ದಾಳಿ ನಡೆಸಿದೆ.

ರೆಡ್ಡಿ ಆಪ್ತರೆನಿಸಿಕೊಂಡಿರುವ ಇನ್ನೂ ಹಲವರ ಮನೆಗಳಿಗೆ ದಾಳಿ ಸಾಧ್ಯತೆಯಿರುವುದಾಗಿ ಮೂಲಗಳು ತಿಳಿಸಿವೆ. ಈ ನಡುವೆ ರೆಡ್ಡಿ ಶೀಘ್ರ ಬಿಡುಗಡೆಗಾಗಿ ಬಳ್ಳಾರಿಯಲ್ಲಿ ಅಭಿಮಾನಿಗಳಿಂದ ನವಗ್ರಹ ಪೂಜೆ ನಡೆಸಿರುವುದು ವಿಶೇಷವಾಗಿ ಕಂಡುಬಂದಿತ್ತು.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಜನಾರ್ದನ ರೆಡ್ಡಿ, ಬಳ್ಳಾರಿ ಗಣಿಧಣಿ, ಸಿಬಿಐ ದಾಳಿ, ಕರ್ನಾಟಕ, ಅಕ್ರಮ ಗಣಿಗಾರಿಕೆ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ