ಯುವ ಕಾಂಗ್ರೆಸ್ ಅಧ್ಯಕ್ಷಗಾದಿಯತ್ತ ಕಣ್ಣು ನೆಟ್ಟಿರುವ ರಮ್ಯಾ, ಬೂತ್ ಮಟ್ಟದ ಪದಾಧಿಕಾರಿಯಾಗುವ ನಿಟ್ಟಿನಲ್ಲಿ ಸ್ಫರ್ಧಾ ಕಣಕ್ಕಿಳಿದಿದ್ದರು. ಇತ್ತೀಚೆಗಷ್ಟೇ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮಾದರಿಯಾಗಿದ್ದಾರೆ ಎಂಬ ಹೇಳಿಕೆ ನೀಡಿದ್ದ ರಮ್ಯಾ ಅವರಿಗೆ ಇದೀಗ ಬಿಜೆಪಿ ಪಕ್ಷದಿಂದಲೂ ಆಹ್ವಾನ ಬಂದಿದಿಯಂತೆ!
ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವ ಭಿತ್ತಿಪತ್ರವೊಂದರಲ್ಲಿ ರಮ್ಯಾ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಲಾಗಿದೆ. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ನಾಯಕತ್ವವನ್ನು ಬೆಂಬಲಿಸುವ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಬೇಕು ಎಂಬ ಆಹ್ವಾನ ನೀಡಲಾಗಿದೆ.
ಆದರೆ ಈ ಬಗ್ಗೆ ಬಿಜೆಪಿ ಪಕ್ಷವು ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಅಲ್ಲದೆ ಚಿತ್ರನಟಿ ರಮ್ಯಾ ಅವರಿಂದಲೂ ಯಾವುದೇ ಪ್ರತಿಕ್ರಿಯೆ ಲಭಿಸಿಲ್ಲ. ಆದರೆ ಪೋಸ್ಟರ್ ಮೂಲಕ ರಮ್ಯಾಗೆ ಆಹ್ವಾನ ನೀಡಿದವರು ಯಾರು ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ.