PRPR ರಾಜ್ಯ ಸರ್ಕಾರವನ್ನು ಜ.15 ರೊಳಗಾಗಿ ಉರುಳಿಸುವುದಾಗಿ ಪ್ರಕಟಿಸಿರುವ ಮಾಜಿ ಮುಖ್ಯಮಂತ್ರಿ, ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಸರ್ಕಾರ ಉರುಳಿಸಿದರೆ ರಾಜ್ಯದ ಜನತೆ ತಮ್ಮನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.ಜಗದೀಶ್ ಶೆಟ್ಟರ್ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯದ ಜನತೆಗೆ ಅನುಕೂಲವಾಗುವಂತಹ ಬಜೆಟ್ ಫೆಬ್ರವರಿಯಲ್ಲಿ ಮಂಡನೆಯಾಗಲಿದ್ದು, ಇದಕ್ಕಾಗಿ ಎಲ್ಲಾ ಸಿದ್ದತೆಗಳು ನಡೆದಿದೆ ಎಂದು ತಿಳಿಸಿದ್ದಾರೆ.ಬಜೆಟ್ ಮಂಡನೆ ಸಂದರ್ಭದಲ್ಲಿ ಸರ್ಕಾರ ಉರುಳಿಸುವ