ಕ್ಯಾಲ್ಸಿಯಂ ಅಂಶಗಳು ಆಧಿಕವಾಗಿರುವ ಮೊಸರು ಸೇವನೆ ಆರೋಗ್ಯಕ್ಕೆ ಉತ್ತಮ

ಮೊಸರು ಅಧಿಕ ರಕ್ತದೊತ್ತಡವನ್ನುಕಡಿಮೆ ಮಾಡುವ ಗುಣವನ್ನು ಹೊಂದಿದೆ. ಮೊಸರಿನಲ್ಲಿರುವ ಪೊಟ್ಯಾಷಿಯಮ್ ಮತ್ತು ಮೆಗ್ನೀಷಿಯಮ್’ಗಳೊಂದಿಗೆ ವಿಶೇಷ ಪ್ರೋಟೀನ್’ಗಳು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗೆಯೇ ಮೊಸರನ್ನುಸೇವಿಸುವುದರಿಂದ ರಕ್ತದೊತ್ತಡವನ್ನು ಕಾಪಾಡಿಕೊಂಡು ಆರೋಗ್ಯಕರ ಹೃದಯವನ್ನು ಪಡೆಯಬಹುದು.

photo credit social media

ಮೊಸರಿನಲ್ಲಿ ಕ್ಯಾಲ್ಸಿಯಂ ಅಂಶಗಳು ಆಧಿಕವಾಗಿದ್ದು, ಇದು ಮೂಳೆಗಳ (Bones) ಆರೋಗ್ಯವನ್ನು ಕಾಪಾಡುತ್ತದೆ. ಹೀಗಾಗಿ ಮೊಸರನ್ನು ದಿನನಿತ್ಯ ಸೇವನೆ ಮಾಡುವುದರಿಂದ ದೇಹಕ್ಕೆ ಅಧಿಕ ಪ್ರಮಾಣದಲ್ಲಿ ಖನಿಜ ಕ್ಯಾಲ್ಸಿಯಂ ಸಿಗುತ್ತದೆ. ಒಂದು ಕಪ್ ಮೊಸರು ಸುಮಾರು 275 ಮಿ.ಗ್ರಾಂ ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ.

ಕ್ಯಾಲ್ಸಿಯಂನ ದೈನಂದಿನ ಡೋಸ್ ಮೂಳೆ ಸಾಂದ್ರತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಹಾಗೆ ಮೂಳೆಗಳನ್ನು ಬಲಪಡಿಸುತ್ತದೆ. ಅದಲ್ಲದೆ ಮೊಸರಿನಲ್ಲಿ ಕೊಬ್ಬು ಮತ್ತು ಕ್ಯಾಲೋರಿಗಳ ಪ್ರಮಾಣ ಕಡಿಮೆ ಇದೆ. ಹೀಗಾಗಿ, ನಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಹಾಯ ಮಾಡುತ್ತದೆ.

ಮೊಸರು ಸೇವನೆಯಿಂದ ತ್ವಚೆಯ ಮೇಲೆ ಒಳ್ಳೆಯ ಪರಿಣಾಮ ಬೀರುತ್ತದೆ. ದಿನನಿತ್ಯ ಮೊಸರುಸೇವನೆಯಿಂದ ಒಣ ಚರ್ಮವು ಮೃದತ್ವವನ್ನು ಪಡೆದುಕೊಳ್ಳುತ್ತದೆ. ಜಠರದ ಸಮಸ್ಯೆಗಳಿಂದಾಗಿ ಬಹಳಷ್ಟು ಜನರು ಮೊಡವೆಗಳಿಂದ ಬಳಲುತ್ತಿದ್ದಾರೆ. ಅಂತವರು ಮೊಸರನ್ನು ಬಳಸುವ ಮೂಲಕ ಪರಿಹಾರವನ್ನು ಕಂಡುಕೊಳ್ಳಬಹುದು.

ದೇಹದಲ್ಲಿ ರೋಗನಿರೋಧಕ ಶಕ್ತಿಯ ಪ್ರಮಾಣವನ್ನು ಹೆಚ್ಚಿಸುತ್ತದೆ . ಇದು ಖನಿಜಗಳು ಮತ್ತು ವಿಟಮಿನ್ಗಳು ಸೇರಿದಂತೆ ಹೆಚ್ಚು ಪೋಷಕಾಂಶಗಳನ್ನು ಹೊಂದಿದೆ. ಈ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕಾರಣವಾಗಿವೆ. ಹಾಗೇ ಸೂಕ್ಷ್ಮಜೀವಿಗಳ ವಿರುದ್ಧ ಹೋರಾಡುತ್ತವೆ

ಕರುಳಿನ ಪ್ರದೇಶವನ್ನು ರಕ್ಷಿಸುತ್ತವೆ. ಸುಮಾರು 200 ಗ್ರಾಂ ಮೊಸರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮಾತ್ರೆಗಳಿಗೆ ಸಮ. ಮೊಸರಿನಲ್ಲಿನ ಪ್ರೋಬಯಾಟಿಕ್ಗಳು ದೇಹವನ್ನು ವಿವಿಧ ವೈರಲ್ ಮತ್ತು ಬ್ಯಾಕ್ಟೀರಿಯಾದ ಸೋಂಕಿನ ವಿರುದ್ಧ ಹೋರಾಡಲು ಮತ್ತು ಆರೋಗ್ಯವಾಗಿರಿಸಲು ಸಹಾಯಮಾಡುತ್ತದೆ.

ಉರಿಯೂತದ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಹೊಟ್ಟೆ ಕೆಟ್ಟಾಗ ಚಿಕಿತ್ಸೆಯ ಮಾರ್ಗವಾಗಿ ಮೊಸರನ್ನು ಬಳಸಬಹುದು.

ಹೊಟ್ಟೆಯ ಕಿರಿಕಿರಿಯನ್ನು ಗುಣಪಡಿಸುತ್ತದೆ. ಹಾಗೇ ಹೊಟ್ಟೆ ಉಬ್ಬುವುದು, ಕೆರಳಿಸುವ ಕರುಳಿನ ಸಹಲಕ್ಷಣಗಳು, ಭೇದಿ, ಮಲಬದ್ಧತೆ, ಜಠರಗರುಳಿನ ಅಸ್ವಸ್ಥತೆಗಳು ಮತ್ತು ಅತಿಸಾರದಂತಹ ಪರಿಸ್ಥಿತಿಗಳನ್ನು ಕಡಿಮೆ ಮಾಡುತ್ತದೆ.