ತೂಕವನ್ನು ಕಡಿಮೆಗೊಳಿಸಿಕೊಳ್ಳಲು ಬಯಸುವವರಿಗೆ ಇದು ಆರೋಗ್ಯಕರ

ತೂಕವನ್ನು ಕಡಿಮೆಗೊಳಿಸಿಕೊಳ್ಳಲು ಬಯಸುವವರಿಗೆ ಇದು ಆರೋಗ್ಯಕರ ತೂಕವನ್ನು ಉಳಿಸಿಕೊಳ್ಳಲು ಮತ್ತು ಹಸಿವಾದಾಗ ತಿನ್ನಲು ಅತ್ಯಂತ ಉಪಯೋಗಕಾರಿಯಾಗಿದೆ. ಕರ್ಬೂಜ ಹಣ್ಣು ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟ್‍ಗಳನ್ನು ಸಹ ಸಾಕಷ್ಟು ಪ್ರಮಾಣದಲ್ಲಿ ಹೊಂದಿರುತ್ತವೆ.

photo credit social media

ಕರ್ಬೂಜ ಹಣ್ಣಿನಲ್ಲಿ ಶೇ.95% ರಷ್ಟು ನೀರಿನಂಶವನ್ನು ಹೊಂದಿದ್ದು, ವಿಟಮಿನ್ ಮತ್ತು ಖನಿಜಾಂಶಗಳನ್ನು ಯಥೇಚ್ಛವಾಗಿ ಹೊಂದಿರುತ್ತದೆ.

ನೀರಿನಂಶದ ಜೊತೆಗೆ ಕರ್ಬೂಜ ಹಣ್ಣು ತಂಪು ಮತ್ತು ಶಮನಕಾರಿ ಗುಣವನ್ನು ಹೊಂದಿದೆ. ಇದು ಎದೆ ಉರಿಯನ್ನು ಶಮನ ಮಾಡುತ್ತದೆ ಮತ್ತು ಮೂತ್ರಕೋಶಗಳಲ್ಲಿ ಇರುವ ಕಶ್ಮಲಗಳನ್ನು ಸ್ವಚ್ಛಗೊಳಿಸುತ್ತದೆ.

ಉತ್ತಮ ಆರೋಗ್ಯದ ಲಾಭಗಳ ಜೊತೆಗೆ ನಿಮ್ಮ ತ್ವಚೆಯನ್ನು ಸಹ ಕಾಪಾಡುತ್ತದೆ. ಇದರಲ್ಲಿ ವಿಟಮಿನ್ ಎ ಸಹ ಲಭ್ಯವಿದ್ದು, ಅವು ತ್ವಚೆಯ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನುವಹಿಸುತ್ತವೆ.

ಆರೋಗ್ಯಕರ ತೂಕವನ್ನು ಉಳಿಸಿಕೊಳ್ಳಲು ಮತ್ತು ಹಸಿವಾದಾಗ ತಿನ್ನಲು ಅತ್ಯಂತ ಉಪಯೋಗಕಾರಿಯಾಗಿದೆ.

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶಗಳಾಗಿದ್ದು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು ನೆರವಾಗುತ್ತವೆ.

ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಕಡಿಮೆಯಾಗಿಸಲು ನೆರವಾಗುತ್ತದೆ.