ರಾಗಿಯ ಆರೋಗ್ಯ ಪ್ರಯೋಜನಗಳು ಬಲ್ಲವನಿಗೆ ಖಂಡಿತ ರೋಗವಿಲ್ಲ!

ರಾಗಿ ಮುದ್ದೆ, ನಾಟಿ ಕೋಳಿ ಸಾರು ಎಂದರೆ ನಮ್ಮ ಕನ್ನಡಿಗರು ಹೆಚ್ಚಿನವರು ಬಾಯಿ ಚಪ್ಪರಿಸುವರು. ಇದು ತುಂಬಾ ರುಚಿಕರ ಮಾತ್ರವಲ್ಲದೆ, ಆರೋಗ್ಯಕ್ಕೂ ಒಳ್ಳೆಯದು. ಕರ್ನಾಟಕದ ಕೆಲವೊಂದು ಭಾಗಗಳಲ್ಲಿ ರಾಗಿ ಮುದ್ದೆಯನ್ನು ಪ್ರತಿನಿತ್ಯವೂ ಆಹಾರ ಕ್ರಮದಲ್ಲಿ ಬಳಕೆ ಮಾಡುವರು.

photo credit social media

ಇನ್ನು ಕೆಲವರು ರಾಗಿಯ ರೊಟ್ಟಿ ಮಾಡಿಕೊಂಡು ಅದನ್ನು ಬಳಸುವರು. ರಾಗಿ ದೋಸೆ ಕೂಡ ತುಂಬಾ ಜನಪ್ರಿಯವಾಗಿದೆ. ರಾಗಿಯಲ್ಲಿ ಇರುವಂತಹ ಹಲವಾರು ರೀತಿಯ ಪೋಷಕಾಂಶಗಳು ದೇಹಕ್ಕೆ ತುಂಬಾ ಒಳ್ಳೆಯದು ಇದು ನಮ್ಮ ಆರೋಗ್ಯ ಕಾಪಾಡಲು ತುಂಬಾ ಲಾಭಕಾರಿ.

ಬೇರೆ ಯಾವುದೇ ಧಾನ್ಯಗಳಲ್ಲಿ ಇಲ್ಲದೆ ಇರುವಂತಹ ಕ್ಯಾಲ್ಸಿಯಂ ಅಂಶವು ರಾಗಿಯಲ್ಲಿದ್ದು, ಇದು ಅಸ್ಥಿರಂಧ್ರತೆ ಸಮಸ್ಯೆಯನ್ನು ಕಡಿಮೆ ಮಾಡುವುದು. ಮಕ್ಕಳಿಗೆ ಆಹಾರ ಕ್ರಮದಲ್ಲಿ ರಾಗಿ ನೀಡಿದರೆ ಅದರಿಂದ ಮೂಳೆಗಳು ಬಲಗೊಳ್ಳುವುದು ಮತ್ತು ಹಲ್ಲುಗಳು ಕೂಡ ಬಲಿಷ್ಠವಾಗುವುದು.

ಜೀರ್ಣಕ್ರಿಯೆ ಸಮಸ್ಯೆಗಳನ್ನು ನಿವಾರಣೆ ಮಾಡಲು ರಾಗಿಯಲ್ಲಿ ಇರುವಂತಹ ನಾರಿನಾಂಶವು ನೆರವಾಗಲಿದೆ. ಅಕ್ಕಿ ಮತ್ತು ಬೇರೆ ಧಾನ್ಯಗಳಿಗೆ ಹೋಲಿಕೆ ಮಾಡಿದರೆ ಇದರಲ್ಲಿ ಆಹಾರದ ನಾರಿನಾಂಶವು ಹೆಚ್ಚಾಗಿದೆ.

ಇದರಿಂದ ಜೀರ್ಣಕ್ರಿಯೆ ಸಂಬಂಧಿ ಸಮಸ್ಯೆಗಳೂ ದೂರವಾಗುವುದು. ರಾಗಿ ತಿಂದರೆ ಅದು ಹೊಟ್ಟೆ ತುಂಬಿದಂತೆ ಮಾಡುವುದು ಹಾಗೂ ಪದೇ ಪದೇ ತಿನ್ನುವುದನ್ನು ಇದು ಕಡಿಮೆ ಮಾಡುವುದು. ಪಾಲಿಫೆನಾಲ್ ಅಂಶವು ರಾಗಿಯಲ್ಲಿದ್ದು, ಇದು ಮಧುಮೇಹಿಗಳಿಗೆ ಒಳ್ಳೆಯದು.

ಲೆಸಿಥಿನ್ ಮತ್ತು ಮೆಥಿಯೋನಿನ್ ಎನ್ನುವ ಅಮಿನೋ ಆಮ್ಲವು ಇದರಲ್ಲಿದ್ದು, ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಇದು ತಗ್ಗಿಸುವುದು ಹಾಗೂ ಯಕೃತ್ ಗೆ ಕೊಬ್ಬು ಕರಗಿಸಲು ನೆರವಾಗುವುದು. ಟ್ರೈಪ್ಟೊಫಾನ್ ಎನ್ನುವ ಮತ್ತೊಂದು ಅಮಿನೋ ಆಮ್ಲವು ಹಸಿವು ತಗ್ಗಿಸುವುದು.

ರಾಗಿಯಲ್ಲಿ ಇರುವಂತಹ ಕಬ್ಬಿಣಾಂಶವು ರಕ್ತಹೀನತೆ ನಿವಾರಣೆ ಮಾಡಲು ನೆರವಾಗುವುದು ಹಾಗೂ ಹಿಮೋಗ್ಲೋಬಿನ್ ಮಟ್ಟವನ್ನು ಸುಧಾರಣೆ ಮಾಡುವುದು. ಇದರಲ್ಲಿ ನೈಸರ್ಗಿಕ ಕಬ್ಬಿಣಾಂಶ ಮತ್ತು ವಿಟಮಿನ್ ಸಿ ಇದ್ದು, ಇದರಿಂದ ಕಬ್ಬಿಣಾಂಶವು ಬೇಗನೆ ಹೀರಿಕೊಳ್ಳುವುದು.

ರಾಗಿಯು ಹೊಟ್ಟೆ ತುಂಬಿದಂತೆ ಮಾಡುವುದು. ಇದರಲ್ಲಿ ಬೇರೆ ಧಾನ್ಯಗಳಿಗಿಂತ ಕೊಬ್ಬಿನಾಂಶವು ತುಂಬಾ ಕಡಿಮೆ ಇದೆ ಮತ್ತು ಒಳ್ಳೆಯ ಕೊಬ್ಬನ್ನು ಹೊಂದಿದೆ. ತೂಕ ಇಳಿಸಿಕೊಳ್ಳಲು ಬಯಸುವವರು ರಾಗಿಯನ್ನು ಅನ್ನ ಮತ್ತು ಗೋಧಿ ಬದಲಿಗೆ ಬಳಕೆ ಮಾಡಬಹುದು. ಅಮಿನೋ ಆಂಲವು ತೂಕ ಇಳಿಸಲು ಸಹಕಾರಿ ಆಗಿದೆ.