ಈ ಹಣ್ಣು ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಪರಂಗಿ ಹಣ್ಣಿನಲ್ಲಿ ಪೊಟ್ಯಾಶಿಯಂ, ನಾರಿನ ಅಂಶ ಮತ್ತು ಆಂಟಿ ಆಕ್ಸಿಡೆಂಡ್ ಅಂಶಗಳ ಪ್ರಮಾಣ ಹೇರಳವಾಗಿ ಕಂಡುಬರುತ್ತದೆ. ಹಾಗಾಗಿ ಖಾಲಿ ಹೊಟ್ಟೆಯಲ್ಲಿ ಪರಂಗಿ ಹಣ್ಣನ್ನು ಸೇವಿಸುವು ದರಿಂದ ಹೃದಯದ ಸಮಸ್ಯೆ, ಹೆಚ್ಚಿನ ಕೊಲೆಸ್ಟ್ರಾಲ್ ತೊಂದರೆ ಮತ್ತು ಪಾರ್ಶ್ವವಾಯು ತರಹದ ಲಕ್ಷಣಗಳು ದೂರವಾಗುತ್ತವೆ.

photo credit social media

ಪರಂಗಿ ಹಣ್ಣನ್ನು ತಿಂದರೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕಂತೆ! ಆಗ ಇದರಿಂದ ಪೂರ್ಣ ಪ್ರಮಾಣದಲ್ಲಿ ನಮ್ಮ ಆರೋಗ್ಯಕ್ಕೆ ಸಿಗುವ ಎಲ್ಲಾ ಪ್ರಯೋಜನಗಳು ಸಿಗುತ್ತವೆ.

ವರ್ಷ ಪೂರ್ತಿ ಸಿಗುವ ಹಣ್ಣು ಎಂದರೆ ಪರಂಗಿ ಹಣ್ಣು ಎಂದು ಹೇಳಬಹುದು. ಕೇವಲ ಮಾರು ಕಟ್ಟೆಯಲ್ಲಿ ಮಾತ್ರವಲ್ಲದೆ ನಾವೇ ಸ್ವತಹ ಇದನ್ನು ಮನೆಯ ಬಳಿ ಬೆಳೆಯಬಹುದು. ಭೂಮಿಯ ಫಲವತ್ತತೆಯ ಆಧಾರದ ಮೇಲೆ ಪರಂಗಿ ಹಣ್ಣಿನ ರುಚಿ ನಿಂತಿರುತ್ತದೆ. ಈಗ ವಿಷಯ ಎಂದರೆ ಖಾಲಿ ಹೊಟ್ಟೆಯಲ್ಲಿ ಪರಂಗಿ ಹಣ್ಣನ್ನು ತಿನ್ನುವುದರಿಂದ ಲಾಭಾ ಜಾಸ್ತಿ ಎಂದು.

ಬಿಪಿ, ಶುಗರ್ ಇರುವವರು ಇದರ ಸೇವನೆ ಮಾಡಬಹುದು. ಪರಂಗಿ ಹಣ್ಣಿನ ಜ್ಯೂಸ್ ಕುಡಿಯಬಹುದು. ಪರಂಗಿ ಹಣ್ಣಿನ ಆರೋಗ್ಯಕರ ಲಾಭಗಳನ್ನು ನಿಮ್ಮದಾಗಿಸಿಕೊಳ್ಳಲು ನೀವು ಸಹ ಬೆಳಗಿನ ಸಮಯದಲ್ಲಿ ತಿಂಡಿ ತಿನ್ನುವ ಮುಂಚೆ ಇದನ್ನು ಸೇವಿಸಿ. ನಿಮ್ಮ ಆರೋಗ್ಯದ ಜೊತೆಗೆ ನಿಮ್ಮ ಸೌಂದರ್ಯ ಕೂಡ ಹೆಚ್ಚುತ್ತದೆ ಎಂದು ಹೇಳುತ್ತಾರೆ.

ಹೌದು ಪರಂಗಿ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಅಜೀರ್ಣತೆ ಸಮಸ್ಯೆ ದೂರವಾಗುತ್ತದೆ. ಪರಂಗಿ ಹಣ್ಣಿನ ಪ್ರಭಾವದಿಂದ ದೇಹದ ಜೀರ್ಣಶಕ್ತಿ ವೃದ್ಧಿಸುತ್ತದೆ. ಇಷ್ಟೇ ಅಲ್ಲದೆ ನಮ್ಮ ದೇಹ ನಾವು ತಿನ್ನುವ ಆಹಾರ ವನ್ನು ಅತ್ಯಂತ ಪರಿಣಾಮಕಾರಿಯಾಗಿ ಸಂಸ್ಕರಿಸಲು ನೆರವಾಗುತ್ತದೆ.

ಬೆಳಗಿನ ಸಮಯದಲ್ಲಿ ಸಾಧ್ಯವಾದಷ್ಟು ನಾರಿನಾಂಶ ಹೆಚ್ಚಾಗಿರುವ ಹಣ್ಣು ತರಕಾರಿಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಂಡರೆ ತುಂಬಾ ಉತ್ತಮ.​

ಪರಂಗಿ ಹಣ್ಣಿನಲ್ಲಿ ವಿಟಮಿನ್ ಸಿ ಇರುವುದರಿಂದ ಇದು ನಮ್ಮ ದೇಹದ ರೋಗ ನಿರೋಧಕ ಶಕ್ತಿಗೆ ಸಾಕಷ್ಟು ಅನುಕೂಲ ಮಾಡಿಕೊಡುತ್ತದೆ. ಇದರಲ್ಲಿ ಸೋಂಕು ಮತ್ತು ಆರೋಗ್ಯದ ಅಸ್ವಸ್ಥತೆಗಳನ್ನು ದೂರ ಮಾಡುವ ಗುಣವಿದೆ. ಬೆಳಗಿನ ಸಮಯದಲ್ಲಿ ಇಂತಹ ಆಹಾರಗಳನ್ನು ಹೆಚ್ಚಾಗಿ ಸೇವಿಸಿ.

ಪರಂಗಿ ಹಣ್ಣು ತನ್ನಲ್ಲಿ ಕಡಿಮೆ ಸಕ್ಕರೆ ಪ್ರಮಾಣವನ್ನು ಹೊಂದಿದ್ದು ಅಧಿಕ ನಾರಿನಾಂಶವನ್ನು ಹೊಂದಿದೆ. ಹಾಗಾಗಿ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವು ದರಿಂದ ಸಕ್ಕರೆ ಕಾಯಿಲೆ ಇರುವವರಿಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಉತ್ತಮವಾಗಿ ನಿರ್ವಹಣೆಯಾಗುತ್ತದೆ.